Day: July 29, 2021

ನಗರದಲ್ಲಿ 31-07-2021 ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗದಲ್ಲಿ 31.07.2021ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ – 5ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆವರೆಗೆ, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ ಐ ಸಿ ಆಫೀಸ್,…

ಗ್ರಾಮಾಂತರ ಬಿಜೆಪಿಯಿಂದ ಮಂಡಲ ಕಾರ್ಯಕಾರಣಿ ಸಭೆ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆ ಅಧ್ಯಕ್ಷರಾದ ರತ್ನಾಕರ್ ಶೆಣೈ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ವಿಭಾಗ ಪ್ರಭಾರಿ ಗಳಾದ ಗಿರೀಶ್ ಪಟೇಲ್ ಹಾಗೂ ವಿಭಾಗ ಸಂಘಟನಾ ಸಹ ಕಾರ್ಯದರ್ಶಿ ಎ.ಎನ್.ನಟರಾಜ್ ಮುಂದಿನ ಸಂಘಟನಾ ಬಗ್ಗೆ…

ವಿದ್ಯಾರ್ಥಿಗಳಿಗೆ ಎರಡನೇ ಡೋಸ್ ವ್ಯಾಕ್ಸಿನ್ ನೀಡಬೇಕಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹ…

ದೇಶದಲ್ಲಿ ಮತ್ತು ರಾಜ್ಯದಲ್ಲಿ ಯಶಸ್ವಿಯಾಗಿ ಕರೋನ ಲಸಿಕಾ ಅಭಿಯಾನ ನಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಬಹುತೇಕ ಮೊದಲನೇ ಹಂತದ ಲಸಿಕಾಕರಣ ಆಗಿದೆ. ಈ ನಿಟ್ಟಿನಲ್ಲಿ ಎ.ಬಿ.ವಿ.ಪಿ ವಿದ್ಯಾರ್ಥಿ ಸಮುದಾಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತದೆ. ಹಲವಾರು ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ…

ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ…

ಸಸಿಗಳನ್ನು ನೆಡುವುದರ ಜತೆಯಲ್ಲಿ ಅವುಗಳ ಪಾಲನೆ ಹಾಗೂ ಪೋಷಣೆ ಬಗ್ಗೆಯೂ ಪ್ರಾಮುಖ್ಯತೆ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ತಿಳಿಸಿದರು. ಕೃಷಿನಗರದಲ್ಲಿ ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಹಾಘೂ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ…

ಭದ್ರಾವತಿ ಶಾಸಕರಾದ ಸಂಗಮೇಶ್ ರವರಿಂದ ಗುದ್ದಲಿ ಪೂಜೆ…

ಭದ್ರಾವತಿ ತಾಲೂಕು ಬಾರಂದೂರು ಮತ್ತು ಮಾವಿನಕೆರೆ ಕಾಲೋನಿಯಲ್ಲಿ 35 ಲಕ್ಷ ವೆಚ್ಚದ ಸಿ.ಸಿ ರಸ್ತೆ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಭದ್ರಾವತಿಯ ಮಾನ್ಯ ಜನಪ್ರಿಯ ಶಾಸಕರಾದ ಶ್ರೀ ಬಿ.ಕೆ ಸಂಗಮೇಶ್ವರ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು…