Day: March 5, 2022

ಕರಾಟೆ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಣೆ ಮಾಡಿದ ಬಿ.ಎಸ್. ಯಡಿಯೂರಪ್ಪ…

ಶಿವಮೊಗ್ಗದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರು ವಿವಿಧ ಕರಾಟೆ ಪಂದ್ಯಾವಳಿಗಳಲ್ಲಿ ವಿಜೇತರಾಗಿರುವ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ನ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸಿಟಿ ಕರಾಟೆ ಅಸೋಸಿಯೇಷನ್ ನ ಅಧ್ಯಕ್ಷರಾದ ಶಿವಮೊಗ್ಗ ವಿನೋದ್…

ಸಾಗರದ ಎಲ್ .ಬಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ…

ಸಾಗರದ ಲಾಲ್ ಬಹದ್ದೂರ್ ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ಎನ್ ಸಿಸಿ, ವಿದ್ಯಾರ್ಥಿ ವೇದಿಕೆ,ಕೆ ಎಚ್ ಶ್ರೀನಿವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರ ಜಿ.ಎ.ನಾರಿಬೋಲಿ ಮಹಾವಿದ್ಯಾಲಯ…

ಕೇಂದ್ರ ಸರಕಾರದಿಂದ ಅಮೂಲ್ಯ ಲೋಹಗಳ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಆದ್ಯತೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ…

ಬೆಂಗಳೂರು ಮಾರ್ಚ್‌ 05: ಕೇಂದ್ರ ಸರಕಾರ ದೇಶದಲ್ಲಿರುವ ಅಮೂಲ್ಯ ಲೋಹಗಳ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ದೇಶದಲ್ಲಿ ಸುಮಾರು 900 ಟನ್‌ ಗಳಷ್ಟು ಬಂಗಾರದ ಲೋಹದ ನಿಕ್ಷೇಪ ಇರುವ ಅಂದಾಜಿದ್ದು ಅದರ ಜೊತೆಗೆ ಕಾಪರ್‌, ಅಲ್ಯೂಮಿನಿಯಂ ನ ನಿಕ್ಷೇಪಗಳ ಶೋಧನೆಗೂ…

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರಿಂದ ರೈತಭಿಮಾನ ಕಾರ್ಯಕ್ರಮದಲ್ಲಿ ಬಿ.ಎಸ್. ಯಡಿಯೂರಪ್ಪ ನವರಿಗೆ ಸನ್ಮಾನ…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ರೈತಾಭಿಮಾನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು. ಸಚಿವರಾದ ಕೆ.ಎಸ್.ಈಶ್ವರಪ್ಪ, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಬಿ.ಸಿ.ಪಾಟೀಲ್, ಸಂಸದರಾದ ಬಿ.ವೈ.ರಾಘವೇಂದ್ರ, ಶಿವಕುಮಾರ್ ಉದಾಸಿ, ಶಾಸಕರಾದ ಹರತಾಳು ಹಾಲಪ್ಪ, ಅಶೋಕ…

ಜೆ.ಎನ್.ಎನ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹರ್ಷ ಮಠದ್ ರವರಿಗೆ ಪಿಹೆಚ್‌ಡಿ ಪ್ರಧಾನ…

ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹರ್ಷ.ಸಿ.ಮಠದ್ ಅವರು ಮಂಡಿಸಿದ ‘ಭಾರತೀಯ ಉಕ್ಕು ಉದ್ಯಮದ ಕಾರ್ಯಕ್ಷಮತೆಯ ಕುರಿತ ತೌಲನಿಕ ಅಧ್ಯಯನ’ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿ.ಹೆಚ್.ಡಿ ಪದವಿ ನೀಡಿದೆ. ಕುವೆಂಪು ವಿ.ವಿಯ ಕಾಲೇಜು ಅಭಿವೃದ್ಧಿ…

850 ಕೋಟಿ ರೂಪಾಯಿಗಳು ಏತ ನೀರಾವರಿ ಯೋಜನೆಗೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ನವರಿಂದ ಚಾಲನೆ…

ಶಿಕಾರಿಪುರ ತಾಲೂಕಿನ ಉಡುಗಣಿ, ತಾಳಗುಂದ ಮತ್ತು ಹೊಸೂರು ಹೋಬಳಿಗಳ 110ಗ್ರಾಮಗಳ 249ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಸುಮಾರು 850ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಭಾಗವಾಗಿ ಅಡಗಂಟಿ ಗ್ರಾಮದ ಸಮೀಪ ನಿರ್ಮಿಸಿರುವ ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ…

ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ ಶೀಘ್ರ ಪರಿಹಾರಕ್ಕೆ ಆಗ್ರಹಿಸಿ ಎನ್ ಎಸ್ ಯು ಐ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡಬೇಕು ಮತ್ತು ಭಾರತೀಯರನ್ನು ಸುರಕ್ಷಿತವಾಗಿ ಕರೆ ತರಬೇಕು ಎಂದು ಆಗ್ರಹಿಸಿ ಜಿಲ್ಲಾ ಎನ್ ಎಸ್ ಯು ಐ ಘಟಕದಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ರಷ್ಯಾ ಹಾಗೂ ಉಕ್ರೇನ್…

ನಮ್ಮ ಪರಂಪರೆಯಲ್ಲಿರುವ ಸಂಸ್ಕೃತಿ-ಕಲೆ ಆಚಾರ-ವಿಚಾರಗಳನ್ನು ಜೀವನದಲ್ಲಿ ತೊಡಗಿಸಿಕೊಳ್ಳಬೇಕು-ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ…

ಶಿವಮೊಗ್ಗ: ನಮ್ಮ ಪರಂಪರೆಯಲ್ಲಿರುವ ಸಂಸ್ಕೃತಿ, ಕಲೆ, ಆಚಾರ, ವಿಚಾರಗಳನ್ನು ಜೀವಂತವಾಗಿರಿಸುವುದಕ್ಕೆ ವಚನ ಕಂಠಪಾಠ ಸ್ಪರ್ಧೆ, ವಚನ ಗಾಯನ ಸ್ಪರ್ಧೆ, ರಂಗೋಲಿ ಸ್ಪರ್ಧೆ ಹಾಗೂ ಭಜನಾ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು. ಅವರು ಇಂದು ಶ್ರೀ…

ಹಲ್ಲೆಗೀಡಾದ ವೆಂಕಟೇಶನ್ ಆರೋಗ್ಯ ವಿಚಾರಿಸಿದ ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಗೋಪಾಳದ ಪದ್ಮಾ ಟಾಕೀಸ್ ಬಳಿ ಮೊನ್ನೆ ರಾತ್ರಿ ಹಲ್ಲೆಗೀಡಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾದ ವೆಂಕಟೇಶ್ ಅವರನ್ನು ಸಚಿವರ ಕೆ.ಎಸ್. ಈಶ್ವರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಕೆ.ಇ. ಕಾಂತೇಶ್, ಎಸ್.ಎನ್. ಚನ್ನಬಸಪ್ಪ, ಮೋಹನ್ ರೆಡ್ಡಿ, ಜಗದೀಶ್, ನಾಗರಾಜ್, ಸಂತೋಷ್…

ಮಾ 6 ರಂದು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಬಿ.ಎಸ್.ಯಡಿಯೂರಪ್ಪ ರವರಿಗೆ 2019-20 ನೇ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ…

ಶಿವಮೊಗ್ಗ: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಮಾಜಿ ಮುಖ್ಯಮಂತ್ರಿ ಶರಣ ಬಿ.ಎಸ್. ಯಡಿಯೂರಪ್ಪನವರಿಗೆ 2019 -20 ನೇ ಸಾಲಿನ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ. 6 ರಂದು ಬೆಳಗ್ಗೆ 10.30 ಕ್ಕೆ ಕುವೆಂಪು ರಂಗಮಂದಿರದಲ್ಲಿ…