Month: November 2024

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಅಪರಾಧ ವಿಮರ್ಶನಾ ಸಭೆ…

ಶ್ರೀ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ,…

SENIOR CHAMBER INTERNATIONAL ಶಿವಮೊಗ್ಗ ಭಾವನ ವತಿಯಿಂದ ಸಮಾಜಮುಖಿ ಕಾರ್ಯಕ್ರಮ…

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಶಿವಮೊಗ್ಗ ಭಾವನ ಸಂಸ್ಥೆಗೆ ರಾಷ್ಟ್ರೀಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ ಕೆಲವು ದಿನಗಳ ಹಿಂದೆ ಶಿವಮೊಗ್ಗ ನಗರದ ಶುಭಂ ಹೋಟೆಲ್ ನ ಆದ್ಯ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾದ ಶಶಿಕಲಾ ಶೆಟ್ಟಿ ರವರು ದಿನದ ಕಾರ್ಯಕ್ರಮವನ್ನು ವಿಶೇಷ ಮೆರವಣಿಗೆಯಲ್ಲಿ…

ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ…

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ನವೆಂಬರ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ನ. 22 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು…

ನದಿಯಲ್ಲಿ ತೇಲುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ERSS -112 ಪೊಲೀಸ್ ಸಿಬ್ಬಂದಿ…

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕದಹೊಳೆ ಗ್ರಾಮದ ಸಮೀಪ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ತೇಲುತ್ತಿದೆ ಎಂದು ERSS-112 ಗೆ ಸಾರ್ವಜನಿಕರಿಂದ ಕರೆಬಂದ ಮೇರೆಗೆ ERV ವಾಹನದ ಅಧಿಕಾರಿಗಳಾದ 1) ಲೋಕೇಶ್, AHC-50, ಡಿಎಆರ್, ಶಿವಮೊಗ್ಗ ಮತ್ತು 2) ಸಾದತ್, CPC-1868, ಆಗುಂಬೆ…

ಕಾರ್ಯಕರ್ತರು ನಮ್ಮ ಪಕ್ಷದ ಜೀವಾಳ ಅವರ ಪರಿಶ್ರಮ ಸಂಘಟನಾ ಪರ್ವ ಬಲಪಡಿಸಿದೆ-ಬಿ.ಎಸ್. ಯಡಿಯೂರಪ್ಪ…

ಭಾರತೀಯ ಜನತಾ ಪಕ್ಷ ಶಿಕಾರಿಪುರ ಮಂಡಲ ಪಟ್ಟಣದ ಮಂಗಳ ಭವನ ಹಿಂಭಾಗದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಂಘಟನಾ ಪರ್ವ ಸಮಾಲೋಚನಾ ಸಭೆ ಹಾಗೂ ಬೂತ್ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಅಭಿನಂದನಾ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಿಕಟ…

ಧರ್ಮವೆಂದರೆ ಆತ್ಮ ಶುದ್ಧೀಕರಣವೆಂದು ಸಾರಿದವರು ಕನಕದಾಸರು-ಬಾಲ್ಕಿಶ್ ಬಾನು…

ಧರ್ಮ ಎಂದರೆ ಆತ್ಮದ ಶುದ್ದೀಕರಣ. ಹೃದಯ ಶುದ್ದವಾಗಿದ್ದರೆ ಮಾತ್ರ ಧನಾತ್ಮಕ ಚಿಂತನೆ ಸಾಧ್ಯ. ಎಲ್ಲ‌ ಮನುಜರೂ ಸಮಾನರು ಎಂದು ಸಾರಿದವರು ಕನಕದಾಸರು. ನಾವೆಲ್ಲ ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕಿ‌ ಬಲ್ಕೀಶ್ ಬಾನು‌ ಹಳಿದರು. ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ, ಕನ್ನಡ…

ಅನೈರ್ಮಲ್ಯ ಶೌಚಾಲಯ ಮತ್ತು ಮ್ಯಾನುವಲ್ ಸ್ಕ್ವಂಜರ್ ಗಳ  ಮರು ಸಮೀಕ್ಷೆ…

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಗಳ ಮರು ಸಮೀಕ್ಷೆ ನಡೆಸುತ್ತಿದ್ದು, ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವ, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಚರಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಛಗೊಳಿಸುವ, ಶೌಚಾಲಯದ ಮಲಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ಯಾವುದೇ ವ್ಯಕ್ತಿಗಳು…

ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಯಶಸ್ವಿಗೊಳಿಸಿ-ಹೇಮಂತ್ ಕರೆ…

ವಿಶ್ವ ಶೌಚಾಲಯ ದಿನದ ಅಂಗವಾಗಿ ನ.19 ರಿಂದ ಡಿ.10 ರವರೆಗೆ ಜಿಲ್ಲೆಯಾದ್ಯಂತ ‘ನಮ್ಮ ಶೌಚಾಲಯ ನಮ್ಮ ಗೌರª’ ಎಂಬ ವಿಶೇಷ ಆಂದೋಲನವನ್ನು ಏರ್ಪಡಿಸಲಾಗಿದ್ದು ಎಲ್ಲರೂ ಈ ಆಂದೋಲನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಕೋರಿದರು.…

ಮೀನುಗಾರಿಕೆ ಅಭಿವೃದ್ಧಿಯಲ್ಲಿ ಜಾಗತಿಕ ಎಲ್ಲ ವಿಜ್ಞಾನಿಗಳು ಕೈಜೋಡಿಸಬೇಕು-ಡಾ. ಜೆ.ಕೆ.ಜೇನಾ…

ಹವಾಮಾನ ಬದಲಾವಣೆಯಿಂದಾಗಿ ಮೀನಿನ ಸಂತಾನೋತ್ಪತ್ತಿ ಕಡಿಮೆಯಾಗುತ್ತಿದ್ದು, ಇದರಿಂದಾಗಿ ವರ್ಷ ವರ್ಷ ಮೀನಿನ ಉತ್ಪಾದನೆಯಲ್ಲಿ ಕಡಿಮೆಯಾಗುತ್ತಿದೆ. ಇಂತಹ ಪರಿಸರದ ಬದಲಾವಣೆಯನ್ನು ನಿಯಂತ್ರಿಸುವುದು ನಮ್ಮ ಕೈಯಲ್ಲಿಲ್ಲ. ಹವಾಮಾನ ವೈಪರೀತ್ಯಕ್ಕೆ ಹೊಂದಿಕೊಳ್ಳುವಂತಹ ಮೀನಿನ ತಳಿಗಳನ್ನು ಅಭಿವೃದ್ಧಿಪಡಿಸುವುದು ಇಂದಿನ ಅಗತ್ಯವಾಗಿದೆ. ಇದರ ಜೊತೆಗೆ ಮೀನುಗಾರಿಕೆ ಅಭಿವೃದ್ಧಿಯಲ್ಲಿ ಜಾಗತಿಕವಾಗಿ…

ತಾಲೂಕು ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಾತ್ಸವ ಕಾರ್ಯಕ್ರಮ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮತ್ತು ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ನ.21 ರಂದು ಬೆಳಗ್ಗೆ 10 ಕ್ಕೆ ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು ಶಿವಮೊಗ್ಗ ತಾಲ್ಲೂಕು…