ರಾಜ್ಯದಲ್ಲಿ ಕರುನಾ ಲಸಿಕೆಯನ್ನು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಏಕೆ ಕೊಡುತ್ತಿಲ್ಲ ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ 800 ರೂ ಹಾಗೂ 1200 ರೂಪಾಯಿಗಳಿಗೆ ಮಾರಾಟವಾಗುತ್ತಿರುವ ಬಗ್ಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗದ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ ಹಾಗಾದರೆ ಬಡವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಏಕೆ ಸಿಗುತ್ತಿಲ್ಲ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಗುವಂತಾಗಬೇಕು ಈಗಿನ ಪರಿಸ್ಥಿತಿಯಲ್ಲಿ ಜೀವನ ನಡೆಸುವುದೇ ಕಷ್ಟಕರವಾಗಿದೆ ಅಂತದರಲ್ಲಿ ಹಣ ಹೇಗೆ ಹೊಂದಿಸುತ್ತಾರೆ. ಇಂದಿನ ಯುವಕರು ನಮ್ಮ ದೇಶದ ಮುಂದಿನ ಪ್ರಜೆಗಳು. ಅಕ್ಕಪಕ್ಕದ ರಾಜ್ಯಗಳಲ್ಲಿ ಉಚಿತವಾಗಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆಯನ್ನು ಹಾಕುತ್ತಿದ್ದಾರೆ ನಮ್ಮ ರಾಜ್ಯದಲ್ಲಿ ಆಗುತ್ತಿಲ್ಲ ದಯವಿಟ್ಟು ಇದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ
Good job👍😊