ಶಿವಮೊಗ್ಗ: ಡಿಪ್ಲೋಮೋ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳ ಹಲವು ವಿಷಯಗಳಲ್ಲಿ ಅನುತ್ತೀರ್ಣಗೊಳಿಸಿ ಯುಜಿಸಿ ಮತ್ತು ರಾಜ್ಯ ಸರ್ಕಾರದ ಆದೇಶ ಮೀರಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಯುಜಿಸಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಆದೇಶ ಮೀರಿ ಡಿಪ್ಲೋಮ 4ನೇ ಸೆಮಿಸ್ಟರ್ ವಿಧ್ಯಾರ್ಥಿಗಳನ್ನು ಅನುತ್ತೀರ್ಣ ಮಾಡಲಾಗಿದೆ. ಕರ್ನಾಟಕದ ಬಹುತೇಕ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಯುಜಿಸಿ ಮತ್ತು ರಾಜ್ಯ ಸರ್ಕಾರದ ಆದೇಶದ ಮೇರೆಗೆ ವಿದ್ಯಾರ್ಥಿಗಳ ಆಂತರಿಕ ಅಂಕವನ್ನು ಆಧರಿಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿದ್ದಾರೆ. ಆದರೆ, ಡಿಪ್ಲೋಮೋ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳ ಹಲವು ವಿಷಯಗಳಲ್ಲಿ ಅನುತ್ತೀರ್ಣಗೊಳಿಸಲಾಗಿದೆ ಎಂದು ದೂರಿದರು.ಹೀಗೆ ಅನುತ್ತೀರ್ಣಗೊಳಿಸುವ ಮೂಲಕ ಯುಜಿಸಿ ಮತ್ತು ರಾಜ್ಯ ಸರ್ಕಾರದ ಆದೇಶವನ್ನು ಮೀರಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ.
ಇದೆ ವಿಷಯದಲ್ಲಿ ಹಲವು ಬಾರಿ ಕುಲಪತಿಯವರಿಗೆ ಮನವಿ ಮಾಡಿದರೂ, ಯಾವುದೇ ರೀತಿಯಲ್ಲೂ ಸ್ಪಂದನೆ ನೀಡಿರುವುದಿಲ್ಲ. ಆದ್ದರಿಂದ ಇಂದು ನಿಮ್ಮ ಮುಖಾಂತರ ಕುಲಪತಿ ಅವರಿಗೆ ಇನ್ನೊಂದು ಮನವಿ ಸಲ್ಲಿಸುತ್ತಿದ್ದೇವೆ. ಇನ್ನಾದರೂ ಸಂಬಂಧಪಟ್ಟವರು ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡದೆ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಸೌತ್ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್. ಕುಮರೇಶ್, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಸಿಎಂ ಚಿನ್ಮಯ್, ಶಶಾಂಕ್, ಸಚಿನ್, ಪ್ರದೀಕ್, ಭರತ್, ಅವಿಷ್ ಇದ್ದರು.