ಶಿವಮೊಗ್ಗ: ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಇಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್. ನಾಗೇಶ್ ಪುಷ್ಪನಮನ ಸಲ್ಲಿಸಿದರು.ಅವರು ಇಂದು ನಗರದ ಮಲ್ಲೇಶ್ವರ ನಗರದಲ್ಲಿ ನಿಗಮದ ಜಿಲ್ಲಾ ಕಚೇರಿಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ ಮತ್ತು ವಿವಿಧ ಯೋಜನೆಗಳ ಸೌಲಭ್ಯ ವಿತರಣೆಗೆ ಚಾಲನೆ ನೀಡುವ ಮುನ್ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ಸಣ್ಣ ಕೈಗಾರಿಕಾ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ನಿಗಮದ ನಿರ್ದೇಶಕ ಬಿಳಕಿ ಕೃಷ್ಣಮೂರ್ತಿ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ, ಪ್ರಮುಖರಾದ ಜೈರಾಂ, ರಂಗಪ್ಪ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್ ಕುಮಾರ್, ಜಿಲ್ಲಾ ವ್ಯವಸ್ಥಾಪಕ ಎಂ.ಪಿ. ಪರಮೇಶ್ವರಪ್ಪ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…