ರಿಪ್ಪನ್ ಪೇಟೆ ನ್ಯೂಸ್…
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ವಿದ್ಯಾರ್ಥಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿ ಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದಿದೆ.ವಿದ್ಯಾರ್ಥಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಾಲೇಜಿನ 2nd ಬಿಕಾಂ ನ ಎಲ್ಲಾ ವಿದ್ಯಾರ್ಥಿಗಳ ಸ್ಲ್ಯಾಬ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಕೂಡಲೇ ಎಚ್ಚೆತ್ತುಕೊಂಡ ಕಾಲೇಜಿನ ಆಡಳಿತ ವರ್ಗ ದ್ವಿತೀಯ ಬಿಕಾಂ ತರಗತಿಯಲ್ಲಿ ಇದ್ದ ಎಲ್ಲಾ ವಿದ್ಯಾರ್ಥಿಗಳ ಸ್ವ್ಯಾಬ್ ಪರೀಕ್ಷೆ ನಡೆಸಿ,ಸೋಮವಾರದವರೆಗೂ ರಜೆ ಘೋಷಿಸಲಾಗಿದೆ.ಹಾಗೇಯೆ ಸೋಮವಾರದ ನಂತರ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಡಬಲ್ ಡೋಸ್ ಸರ್ಟಿಫಿಕೇಟ್ ತರುವಂತೆ ಕಾಲೇಜಿನ ಪ್ರಾಂಶುಪಾಲರು ಆದೇಶಿಸಿದ್ದಾರೆ.
ಈ ಘಟನೆಯಿಂದ ರಿಪ್ಪನ್ ಪೇಟೆಯ ಜನತೆ ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕದ ಛಾಯೆ ಮೂಡಿದೆ.ಮುಂದೆ ನಡೆಯುವ ಅನಾಹುತಗಳಿಗೆ ಸಂಬಂಧಪಟ್ಟ ಇಲಾಖೆಯವರು ಹೊಣೆಯಾಗಬೇಕು ಆಗುವುದು ಅನಿವಾರ್ಯವಾಗಿದೆ.