ಶಿವಮೊಗ್ಗ : ಮಾನಸಿಕ ಮತ್ತು ದೈಹಿಕ ಆರೋಗ್ಯಯುತ ಸಧೃಡತೆಗೆ ಕ್ರೀಡಾ ಮನೋಭಾವ ಬೆಳಿಸಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕುಲಸಚಿವರಾದ ಪ್ರೋ.ಹೂವಯ್ಯಗೌಡ ಅಭಿಪ್ರಾಯಪಟ್ಟರು.

ಇಂದು ಎಸ್.ವಿ. ಕೃಷ್ಣಮೂರ್ತಿ ರಾಷ್ಟ್ರೀಯ ಮಹಾವಿದ್ಯಾಲಯದ ವತಿಯಿಂದ ಬಿ.ಎಡ್ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕ್ರೀಡಾಕೂಟವನ್ನು ಬಲೂನ್ ಹಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರಾಗಿ ರೂಪಗೊಳ್ಳುತ್ತಿರುವ ನಮ್ಮ ಪ್ರಶಿಕ್ಷಣಾರ್ಥಿಗಳು ಭಾವಿ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಮಾನಸಿಕ ಹಾಗೂ ದೈಹಿಕವಾಗಿ ಸದಾ ಉತ್ಸುಕರಾಗಿರಬೇಕು. ಸದಾ ತಮ್ಮ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ವಾತಾವರಣ ನಿರ್ಮಾಣ ಮಾಡುತ್ತಿರಬೇಕು. ಅಂತಹ ಕ್ರಿಯಾಶೀಲತೆಗೆ ಕ್ರೀಡೆ ಪೂರಕವಾಗಿ ನಿಲ್ಲಲಿದೆ ಎಂದು ಹೇಳಿದರು.

ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಮಾತನಾಡಿ ಕ್ರೀಡೆಯಲ್ಲಿ ಸೋಲು ಗೆಲುವು ಸಹಜವಾದ ಪ್ರಕ್ರಿಯೆಯಾಗಿದ್ದು ಭಾಗವಹಿಸುವಿಕೆ ಪ್ರಮುಖವಾದ ವಿಚಾರ. ಹಲವಾರು ಕೌಶಲ್ಯಗಳನ್ನು ಹೊಂದಿರುವ ಪ್ರಶಿಕ್ಷಣಾರ್ಥಿಗಳು ಶೈಕ್ಷಣಿಕ ಅಧ್ಯಯನದ ಜೊತೆಗೆ ಮಾನಸಿಕ ದೈಹಿಕ ಕ್ರಿಯಾಶೀಲತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಇಂತಹ ಕ್ರೀಡಾಕೂಟ ಸಂಘಟಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ಲಾವಣ್ಯ.ಸಿ.ಇ, ಡಾ.ಎನ್.ಡಿ.ಮಂಜು, ಡಾ.ಶರಣನಾಯಕ್, ಪ್ರೋ.ಮಂಜುನಾಥ. ಡಿ.ಎಸ್, ಸಾಧಿಕ ಬಾನು, ಅರುಂಧತಿ ಸೇರಿದಂತೆ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…