ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಯ ವತಿಯಿಂದ ಜಿಲ್ಲಾ ಸ್ಕೌಟ್ ಭವನದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಆಯುಕ್ತರಾದ ಹೆಚ್. ಡಿ ರಮೇಶ್ ಶಾಸ್ತ್ರೀ ಅವರು ನೇತಾಜಿ ಅವರ ಧೈರ್ಯ, ತ್ಯಾಗ ಸೇವೆಯ ಬಗ್ಗೆ ಮಾಹಿತಿ ತಿಳಿಸಿದರು.
ಜಿಲ್ಲಾ ಆಯುಕ್ತರು ಸ್ಕೌಟ್ ಕೆ.ಪಿ.ಬಿಂದುಕುಮಾರ್, ಜಿಲ್ಲಾ ಕಾರ್ಯದರ್ಶಿ ಹೆಚ್.ಪರಮೇಶ್ವರ, ಜಿಲ್ಲಾ ಖಜಾಂಚಿ ಚೂಡಾಮಣಿ ಈ ಪವಾರ್, ಮಾಧ್ಯಮ ಸಂಪರ್ಕಾಧಿಕಾರಿ ವಿಜಯ್ ಕುಮಾರ್, ಶ್ರೀನಿವಾಸ ವರ್ಮ.ಎಸ್.ಟಿ, ಸಹಾಯಕ ಜಿಲ್ಲಾ ಆಯುಕ್ತರು, ನೂರ್ ಅಹಮದ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳು ಮಲ್ನಾಡ್ ಓಪನ್ ಗ್ರೂಪ್ ನ ಚೇತನ್ ಸಿ ರಾಯನಹಳ್ಳಿ, ಕಬ್-ಬುಲ್ ಬುಲ್, ಸ್ಕೌಟ್ಸ್-ಗೈಡ್ಸ್, ರೋವರ್-ರೇಂಜರ್ ಗಳು ಉಪಸ್ಥಿತರಿದ್ದರು.
ಈ ಸಮಯದಲ್ಲಿ ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ನೆರವೇರಿಸಲಾಯಿತು. ನೇತಾಜಿ ಅವರು ಸೇನೆಯನ್ನು ಕಟ್ಟಿದ್ದು, ಅದರ ಮೂಲಕ ದೇಶದ ಸ್ವಾತಂತ್ರ್ಯ ಕ್ಕೆ ಶ್ರಮಿಸಿದ್ದು, ಹೊರದೇಶಗಳ ಸಹಾಯದಿಂದ ಹೋರಾಟಕ್ಕೆ ಸಜ್ಜಾಗಿದ್ದು ಇನ್ನೂ ಅನೇಕ ನೇತಾಜಿ ಅವರ ಸ್ವಾತಂತ್ರ್ಯ ಹೋರಾಟದ ಬಗ್ಗೆ ಕಾರ್ಯಕ್ರಮದಲ್ಲಿ ತಿಳಿಸಲಾಯಿತು.