ಶಿವಮೊಗ್ಗ: ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಅಥ್ಲೆಟಿಕ್ಸ್ ಕ್ರೀಡಾ ತರಬೇತುದಾರನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಕ್ರೀಡಾಪಟು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಹಾಸ್ಟೆಲ್ನ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್ ಕ್ರೀಡಾ ತರಬೇತುದಾರ ಬಾಳಪ್ಪ ಮಾನೆ ಮಾನಸಿಕ ಹಾಗೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದು, ಈ ವಿಚಾರವಾಗಿ ಸಂಬಂಧಪಟ್ಟ ಕ್ರೀಡಾಧಿಕಾರಿಗಳಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಹಲವು ಬಾರಿ ಮನವಿ ನೀಡಿದ್ದರೂ, ಸಹ ಈ ತರಬೇತುದಾರನ ವಿರುದ್ದ ಕ್ರೀಡಾ ಇಲಾಖೆ ಅಧಿಕಾರಿ ಯಾವುದೇ ಕ್ರಮ ಜರುಗಿಸದೆ ಬಂದಂತಹ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಸಬೂಬು ಹೇಳಿ ಕಳಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕ್ರೀಡಾ ಹಾಸ್ಟೆಲ್ನುಲ್ಲಿ ಗ್ರಾಮೀಣ ಭಾಗದ ಕ್ರೀಡಾಪಟು ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಅಭ್ಯಾಸ ಮಾಡುತ್ತಿದ್ದು, ತರಬೇತುದಾರನಿಂದ ಆದಂತಹ ದೌರ್ಜನ್ಯವನ್ನು ಮೇಲಾಧಿಕಾರಿಗಳಿಗೆ ತಿಳಿಸಿದರೆ ಆ ತರಬೇತುದಾರ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರಿದರು.ಕೂಡಲೇ ಜಿಲ್ಲಾಧಿಕಾರಿಗಳು ತರಬೇತುದಾರರನ್ನು ಅಮಾನತು ಮಾಡುವುದರ ಜೊತೆಗೆ ಕಾನೂನು ರೀತಿ ಕ್ರಮ ಕೈಗೊಂಡು ಹಾಗೂ ನೊಂದ ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸದ ಕ್ರೀಡಾ ಇಲಾಖೆಯ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನೊಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಕ್ರೀಡಾ ತರಬೇತುದಾರ ಬಾಳಪ್ಪ ಮಾನೆಯ ಮಾನಸಿಕ ಹಾಗೂ ಲೈಂಗಿಕವಾಗಿ ಕಿರುಕುಳ ತಳಲಾರದೆ ನಾಲ್ವರು ವಿದ್ಯಾರ್ಥಿನಿಯರು ಹಾಸ್ಟಲ್ ತೊರೆದು ಕ್ರೀಡೆಯನ್ನೇ ಸ್ಥಗಿತಗೊಳಿಸಿದ್ದಾರೆ. ಪೋಷಕರು ಸಹ ತಮ್ಮ ಮಕ್ಕಳನ್ನು ಹಾಸ್ಟೆಲ್ನಿಂಿದ ಕರೆದುಕೊಂಡು ಹೋಗಲು ಸಿದ್ದತೆಯಲ್ಲಿದ್ದಾರೆ. ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಅಮಾನತ್ತು ಮಾಡುವುದರ ಮೂಲಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಗಿರೀಶ್ ಎಚ್ಚರಿಕೆ ನೀಡಿದರು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಮಾತನಾಡಿ, ಈ ತರಬೇತುದಾರ ಈ ಹಿಂದೆ ಕೆಲಸ ಮಾಡಿದ ಸ್ಥಳದಲ್ಲೂ ಸಹ ಈ ರೀತಿಯ ವರ್ತನೆ ಮಾಡಿದ ಆರೋಪಗಳಿವೆ. ಈತನ ಲೈಂಗಿಕ ಕಿರುಕುಳ ತಳಲಾರದೆ ಆತನ ಪತ್ನಿಯೂ ಸಹ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೂಡಲೇ ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇತನ ವಿರುದ್ಧ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಲಾಗುವುದು. ಒಂದು ವೇಳೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕ್ರೀಡಾ ಸಚಿವರಿಗೆ ಮನವಿ ಸಲ್ಲಿಸಿ ಕ್ರಮ ಕೈಗೊಳ್ಳಲು ಆಗ್ರಹಿಸಲಾಗುವುದು ಎಂದರು.ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ಕುೊಮಾರ್, ಮುಖಂಡರಾದ ಎಸ್.ಕುಮರೇಶ್, ಡಿ.ಪುಷ್ಪಕುಮಾರ್, ಈ.ಟಿ. ನಿತೀನ್, ನೊಂದ ವಿದ್ಯಾರ್ಥಿಗಳಾದ ಯಶೋಧ, ಗಂಗಾಧರ, ಜಿ.ರವಿಕುಮಾರ್, ಶಂಕ್ರನಾಯ್ಕ, ಬಸವರಾಜಪ್ಪ, ಮೈನಾ, ರಾಣಿ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…