ಶಿವಮೊಗ್ಗ: ರಾಜೀವ್ ಗಾಂಧಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ 1ನೇ ವಾರ್ಡ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರದಲ್ಲಿ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಮುಖ್ಯ ರಸ್ತೆ ಅರವಿಂದ ನಗರದಲ್ಲಿ ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಾಜಿ ಸೂಡಾ ಅಧ್ಯಕ್ಷ ಎನ್. ರಮೇಶ್ ಮಾತನಾಡಿ, ರಾಜೀವ್ ಗಾಂಧಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕಾರ್ಮಿಕರ ನೋಂದಣಿ ಕಾರ್ಡ್ ಹೊಂದಿಲ್ಲದ ಕಾರ್ಮಿಕರನ್ನು ಗುರುತಿಸಿ ಅವರ ಮನೆ ಬಾಗಿಲಿಗೆ ತೆರಳಿ ಆನ್ ಲೈನ್ ನೋಂದಣಿ ಮುಖಾಂತರ ಕಾರ್ಮಿಕರ ನೋಂದಣಿ ಮಾಡಿ ಕಾರ್ಮಿಕರ ಇಲಾಖೆಯಿಂದ ದೊರೆಯುವ ಸೌಲಭ್ಯ ದೊರಕುವಂತೆ ಮಾಡಲಾಗುತ್ತಿದೆ. ಕಾರ್ಮಿಕರು ಅವರ ಮಕ್ಕಳನ್ನು ಹೆಚ್ಚು ಹೆಚ್ಚು ಶೈಕ್ಷಣತೆಗೆ ಒತ್ತು ನೀಡಲು ವಿದ್ಯಾರ್ಥಿ ವೇತನ ಸೌಲಭ್ಯವನ್ನು ಉಪಯೋಗಿಕೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸೇವಾದಳ ಜಿಲ್ಲಾ ಅಧ್ಯಕ್ಷ ವೈ.ಹೆಚ್. ನಾಗರಾಜ್, ನಿವೃತ್ತ ಡಿ.ವೈ.ಎಸ್.ಪಿ. ಶಿವಕುಮಾರ್, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಗಿರೀಶ್, ಮಹಾನಗರ ಪಾಲಿಕೆ ಸದಸ್ಯ ಮಂಜುನಾಥ, ಮುಖಂಡರಾದ ತಂಗರಾಜ್, ಮುಜೀಬ್ ಇದ್ದರು.