ಶಿವಮೊಗ್ಗ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಇಂದು ಎನ್.ಎಸ್.ಎಸ್. ಮತ್ತು ಚುನಾವಣಾ ಸಾಕ್ಷರತಾ ಕ್ಲಬ್, ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪ್ರಾಚಾರ್ಯ ಡಾ.ಎಚ್.ಎಸ್.ನಾಗಭೂಷಣ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಹೆಗಡೆ, ಐಕ್ಯೂಎಸಿ ಸಂಯೋಜಕ ಡಾ.ಓಂಕಾರಪ್ಪ, ವಿದ್ಯಾಶ್ರೀ ಬಿ.ಕೆ. ಎನ್.ಡಿ.ರಮೇಶ ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕರಾದ ರಮ್ಯಶ್ರೀ ಪ್ರತಿಜ್ಞಾವಿಧಿ ಭೋದಿಸಿದರು.

ವರದಿ ಮಂಜುನಾಥ್ ಶೆಟ್ಟಿ…