ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಬಗ್ಗೆ ಬೇಸರವಿಲ್ಲ. ಒಂದು ಜಿಲ್ಲೆಯಲ್ಲಿ ಕೆಲಸ ಮಾಡಿದ್ದೇವೆ. ಈಗ ಇನ್ನೊಂದು ಜಿಲ್ಲೆಯಲ್ಲಿಯೂ ಕೆಲಸ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲಾ ಕಾರ್ಯಕರ್ತರು ಎಲ್ಲಿಯಾದ್ರೂ ಕೆಲಸ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಕುರಿತಾಗಿ ಪ್ರತಿಕ್ರಿಯೆ ನೀಡಿದರು.ಸಂಪುಟ ವಿಸ್ತರಣೆ ಮಾಡುವುದು ಸಿಎಂ ಅವರ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ಅವರು ಏನು ಕ್ರಮ, ಯಾವ ನಿರ್ಧಾರ ಕೈಗೊಳ್ಳಬೇಕೆಂಬುದನ್ನು ತೀರ್ಮಾಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ಮೊಬೈಲ್ ಮತ್ತು ಗಾಂಜಾ ಲಭ್ಯವಾಗುತ್ತಿವೆ. ಇವು ಹೇಗೆ ಸಿಗುತ್ತಿವೆ ಎಂಬುದರ ಬಗ್ಗೆ ತನಿಖೆ ನಡೆಸಿ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದರು.