ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಪ್ರಕಟಿಸಿರುವ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದು, ಇದಕ್ಕಾಗಿ ರಾಜ್ಯದ ಜನರ ಪರವಾಗಿ ಪ್ರಧಾನಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ನವೆಂಬರ್ ತಿಂಗಳವರೆಗೆ ದೇಶದ 80 ಕೋಟಿ ಜನರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಪ್ರಧಾನಿಯವರ ಈ ನಿರ್ಧಾರಗಳು ಸಂಕಷ್ಟದಲ್ಲಿರುವ ಜನರಿಗೆ ವರದಾನವೆನಿಸಲಿವೆ. ಜನಪರ ಪ್ರಧಾನಿ ಎಂಬುದನ್ನು ಶ್ರೀ ನರೇಂದ್ರ ಮೋದಿ ಅವರು ಈ ಮೂಲಕ ಸಾಬೀತುಪಡಿಸಿದ್ದಾರೆ. ಇದರಿಂದ ಪ್ರಧಾನಿಯವರ ಮೇಲೆ ಜನರ ವಿಶ್ವಾಸ ಇನ್ನಷ್ಟು ಹೆಚ್ಚಲಿದೆ ಎಂದು ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಕೋವಿಡ್ ಲಸಿಕೆ ಉತ್ಪಾದನೆ ಮತ್ತಷ್ಟು ಹೆಚ್ಚಾಗಲಿದೆ. ದೇಶದಲ್ಲಿ 7 ಕಂಪನಿಗಳು ಲಸಿಕೆಯನ್ನು ಉತ್ಪಾದಿಸುತ್ತಿವೆ. ಇನ್ನೂ ಮೂರು ಕಂಪನಿಗಳು ಪ್ರಯೋಗದ ಹಂತದಲ್ಲಿವೆ. ಎರಡು ಲಸಿಕೆಗಳ ಪ್ರಯೋಗ ಬಹಳ ವೇಗವಾಗಿ ನಡೆಯುತ್ತಿದೆ. ನೇಸಲ್ ವ್ಯಾಕ್ಸಿನ್ ಪ್ರಯೋಗ ನಡೆಯುತ್ತಿದೆ. ಭಾರತದ ಲಸಿಕಾ ಅಭಿಯಾನಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂದು ಪ್ರಧಾನಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದು, ಇದು ಅವರ ಕರ್ತವ್ಯಪರತೆಗೆ ಸಾಕ್ಷಿಯಂತಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ವರದಿ ಯೋಗೇಶ್ವರ್ ಬೆಂಗಳೂರು
ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153