ಶಿವಮೊಗ್ಗ: ಜಿಲ್ಲಾ ನ್ಯಾಯಾಲಯದಲ್ಲಿಂದು ಡೇ ಕೇರ್ ಕ್ಲಿನಿಕ್ ಅನ್ನು ಉದ್ಘಾಟಿಸಲಾಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫ ಹುಸೇನ್ ಅವರು ತಮ್ಮ ನ್ಯಾಯಾಲಯದ ಹಿರಿಯ ಸಿಬ್ಬಂದಿ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಡಿಹೆಚ್ಒ ರಾಜೇಶ್ ಸುರಗಿಹಳ್ಳಿ, ವಕೀಲರ ಸಂಘದ ಅಧ್ಯಕ್ಷ ಕೆ. ದೇವೇಂದ್ರಪ್ಪ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್. ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…