ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್.ಎಸ್ ಸುಂದರೇಶ್ , ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಹಾಗೂ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ನೂತನ ಬ್ಲಾಕ್ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿದರು.
ಈ ಸಭೆಯ ಅಧ್ಯಕ್ಷತೆಯನ್ನು ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಬಿ ಲೋಕೇಶ್ ವಹಿಸಿದ್ದರು.
ಈ ಸಭೆಯಲ್ಲಿ. ರಾಜ್ಯ ವಕ್ತಾರ ಅಮೋಸ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಕೆ. ಎಲ್. ಪವನ್ , ನೂತನ ಬ್ಲಾಕ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ್ ಎಂ ಪಟೇಲ್. ಶ್ರೀನಿವಾಸ್. ದರ್ಶನ್ ಗೌಡ, ದರ್ಶನ್, ರಾಜು, ಚೇತನ್, ಪೂರ್ವಿಕ್, ಏನೋಷ್, ಅಭಿಷೇಕ್, ಮಂಜುನಾಥ್, ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.