ಶಿವಮೊಗ್ಗ: ಕೇಂದ್ರ ಕಾರಾಗೃಹದ ಮೇಲೆ ಸಿಇಎನ್ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ಮಾಡಿ ಪ್ರಮುಖ ಆರೋಪಿಯೊಬ್ಬನಿಂದ ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಜೈಲಿನಲ್ಲಿ ಆರೋಪಿ ಬಚ್ಚನ್ ಮೊಬೈಲ್ ಬಳಕೆ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಇತ್ತೀಚೆಗೆ ಜೈಲಿನಿಂದಲೇ ಕರೆ ಮಾಡಿದ್ದ ಬಚ್ಚನ್ ಉದ್ಯಮಿಯೊಬ್ಬರಿಗೆ ಬೆದರಿಕೆಯೊಡ್ಡಿದ್ದ. ಈ ಹಿನ್ನಲೆಯಲ್ಲಿ ಸಿಇಎನ್ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.