ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2021-22ನೇ ಸಾಲಿಗೆ ಸಾಲ ಸೌಲಭ್ಯ ಒದಗಿಸಲು ನಿಗಮದಡಿ ಬರುವ ಜಾತಿ/ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಿರುಸಾಲ/ಸ್ವಸಹಾಯ ಗುಂಪುಗಳಿಗೆ ಸಾಲ ಮತ್ತು ಸಹಾಯಧನ ಯೋಜನೆಯಡಿ ಆಫ್‍ಲೈನ್ ಮೂಲಕ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಫೆ.05 ರೊಳಗೆ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಗಳಲ್ಲಿ ಸಲ್ಲಿಸಬಹುದು.
ಅರ್ಜಿದಾರರು 18 ರಿಂದ 55 ವರ್ಷಗಳೊಳಗಿನವರಾಗಿದ್ದು, ಪ್ರವರ್ಗ-1ರ 6(ಎ) ರಿಂದ 6(ಎಕೆ) ವರೆಗಿನ ಬೆಸ್ತ, ಅಂಬಿಗ/ಅಂಬಿ, ಬಾರ್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ/ಗುಂಡೆಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಲಿಗ, ಕಬ್ಬಲಿ, ಕಹರ್, ಖಾರ್ವಿ/ಕೊಂಕಣಖಾರ್ವಿ, ಕೋಳಿ, ಕೋಳಿಮಹದೇವ್, ಮಡ್ಡರ್, ತೊರೆಯ, ಪಾಗಿ ಜಾತಿಗೆ ಸೇರಿದವರಾಗಿರಬೇಕು.

ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚಿನವರಿಗೆ ಸೌಲಭ್ಯ ಒದಗಿಸಲಾಗುವುದಿಲ್ಲ. ಕಿರುಸಾಲ/ಸ್ವಸಹಾಯ ಗುಂಪು ಯೋಜನೆಗೆ ವಾರ್ಷಿಕ ಆದಾಯ ಮಿತಿ ಗ್ರಾಮಾಂತರ ಪ್ರದೇಶದವರಿಗೆ ರೂ.98000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000 ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ ನಿಯಮಿತ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗಕ್ಕೆ (08182-229634) ಭೇಟಿ ನೀಡಬಹುದು. ಅಥವಾ ನಿಗಮದ ವೆಬ್‍ಸೈಟ್ https://ambigaradevelopment.karnataka.gov.in ನಲ್ಲಿ ಹಾಗೂ ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಪಡೆಯಬಹುದು.

ವರದಿ ಮಂಜುನಾಥ್ ಶೆಟ್ಟಿ…