ಮಹಾತ್ಮ ಗಾಂಧೀಜಿ ರವರ 74ನೇ ಪುಣ್ಯಸ್ಮರಣೆ ಅಂಗವಾಗಿ ಇಂದು ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಾಪೂಜಿಯವರ ಪ್ರತಿಮೆಗೆ ಪುಷ್ಪಾ ನಮನ ಅರ್ಪಿಸಿ ಶ್ರದ್ಧಾಪೂರ್ವಕವಾಗಿ ಗೌರವ ಸಲ್ಲಿಸಲಾಯಿತು.
ನಮನ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ರವರು ಮಾತನಾಡಿ ಯುವಕರು ಗಾಂಧೀಜಿ ಅವರ ಆದರ್ಶ ತತ್ವ ಪಾಲನೆಯನ್ನು ಮಾಡುವ ಮುಖಾಂತರ ಸಮಾಜದಲ್ಲಿ ನೊಂದವರ ಧ್ವನಿಯಾಗಿ ಹೋರಾಟ ಮಾಡುವ ಮುಖಾಂತರ ಗಾಂಧೀಜಿಯವರು ಕಂಡ ಸ್ವರಾಜ್ಯದ ಕನಸನ್ನು ನನಸು ಮಾಡಿದಾಗ ಗಾಂಧೀಜಿಯವರಿಗೆ ಅರ್ಥಪೂರ್ಣವಾದ ಗೌರವ ನೀಡಿದಂತೆ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ನ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ .ಲೋಕೇಶ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್, ಕುಮರೇಶ್ , ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಮಧುಸೂದನ್ ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಗಗನ್ ಗೌಡ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಕೆಎಲ್. ಪವನ್, ಪ್ರಧಾನ ಕಾರ್ಯದರ್ಶಿಗಳಾದ ಎಸ್ ದರ್ಶನ್ ಶಾಮ್, ಸಂಜಯ್, ಮಂಜುನಾಥ್, ಶಂಕರ್, ವಿನಯ್ , ಸಾಗರ್, ರಮೇಶ್, ಇತರರು ಇದ್ದರು.