ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು #ದಾಸರಕಲ್ಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಜಲ ಜೀವನ್ ಮಿಷನ್‌ ಯೋಜನೆಯ ಸಮುದಾಯವಂತಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ಮನೆ‌ಮನೆಗೆ ಗಂಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಎಲ್ಲರೂ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.
ಹಾಗೂ ಜಲ ಜೀವನ ಮಿಷನ್ ಯೋಜನೆಗೆ ಸಮುದಾಯ ವಂತಿಕೆ ಮೊತ್ತವನ್ನು ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಸರ್ಕಾರಕ್ಕೆ ರಾಜ್ಯದಲ್ಲೇ ಮೊದಲ ಬಾರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈಶಾಲಿ ರವರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ರವರು, ಗ್ರಾಪಂ ಆಧ್ಯಕ್ಷರಾದ ಮಲ್ಲನಗೌಡ್ರು, ಹಾಗೂ ಗ್ರಾಮ ಸದಸ್ಯರುಗಳು, ಪಕ್ಷದ ಕಾರ್ಯಕರ್ತರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…