ಶಿವಮೊಗ್ಗ: ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗ ನಗರದ ಕೆ.ಚೇತನ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಯುವ ಕಾಂಗ್ರೆಸ್ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗವಹಿಸುತ್ತ ಉತ್ತಮ ಕೆಲಸ ಮಾಡುತ್ತಿರುವವರನ್ನು ಗುರುತಿಸಿ ಉನ್ನತ ಹೊಣೆಗಾರಿಕೆಯನ್ನು ವಹಿಸಲಾಗುತ್ತಿದೆ. ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಒಳ್ಳೆಯ ಸಾಧನೆ ಮಾಡಿರುವ ಶಿವಮೊಗ್ಗದ ಕೆ.ಚೇತನ್ ಅವರನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಹೊಣೆಗಾರಿಕೆ ನೀಡಲಾಗಿದೆ.
ಕೆ.ಚೇತನ್ ಅವರು ಶಿವಮೊಗ್ಗ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಮಟ್ಟದಲ್ಲಿ ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಜವಾಬ್ದಾರಿಯನ್ನು ಕೆ.ಚೇತನ್ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರು.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮಾರ್ಗದರ್ಶನದಲ್ಲಿ ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಕೆಲಸ ನಿರ್ವಹಿಸುವ ಭರವಸೆ ಇರುವ ನಿಟ್ಟಿನಲ್ಲಿ ಉನ್ನತ ಹೊಣೆಗಾರಿಕೆಯನ್ನು ನೀಡಲಾಗುತ್ತಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಕೆ.ಚೇತನ್ ಅವರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಆಗಿರುವ ಎಂ.ಅನಿಲ್ ಕುಮಾರ್ ಯಾದವ್ ನೇಮಕ ಆದೇಶ ಹೊರಡಿಸಿದ್ದಾರೆ.