ಶಿವಮೊಗ್ಗ: ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡಲು ಆದ ಆದೇಶಗಳ ತುರ್ತು ಜಾರಿಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಇಂದು ಮಾ ಜನ್ ಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡಲು ಸರ್ಕಾರದ ಆದೇಶ ಸುತ್ತೋಲೆ ಹೊರಡಿಸಿದ್ದರೂ, ಈ ಬಗ್ಗೆ ಸರಿಯಾದ ಮಾಹಿತಿ ನೀಡದಿರುವುದರಿಂದ ಈ ಬಾರಿ ಗಣರಾಝ್ಯೋತ್ಸವದ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವಂತಹ ಅಹಿತಕರ ಘಟನೆ ಸಂಭವಿಸಿದ್ದು, ಸಮಾಜಕ್ಕೆ ಮತ್ತು ಅಂಬೇಡ್ಕರ್ ಅವರಿಗೆ ಧಕ್ಕೆ ಉಂಟಾಗಿದೆ ಎಂದು ದೂರಿದರು.

ಆದ್ದರಿಂದ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಸರ್ಕಾರಕ್ಕೆ ಮತ್ತು ರಾಜ್ಯಪಾಲರಿಗೆ ಸುತ್ತೋಲೆ ಪ್ರತಿಗಳು ಆಯಾ ಇಲಾಖೆ ಮತ್ತು ಮುಖ್ಯಸ್ಥರಿಗೆ ತಲುಪಿ ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆ ಜರುಗದಂತೆ ಮಾ ಜನ್ ಜಾಗೃತ ಸಮಿತಿ ಒತ್ತಾಯಿಸಿದೆ.ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಕೆ. ಶಿವಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಟಿ. ಪ್ರವೀಣ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…