ಶಿವಮೊಗ್ಗ: ಭಾರತ ಹಲವು ಧರ್ಮಗಳ ಬೀಡು. ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳ ಆಚರಣೆಗೂ ಅವಕಾಶವಿದ್ದು, ಎಲ್ಲರೂ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ.
ಆದರೆ, ರಾಜಕೀಯ ಹಿತಾಸಕ್ತಿಯಿಂದ ಕಾಣದ ಕೈಗಳ ಕುಮ್ಮಕ್ಕಿನಿಂದಾಗಿ‌ ಹಿಜಾಬ್ ಕೇಸರಿಶಾಲು ವಿವಾದ ಸೃಷ್ಟಿಸಿದ್ದು, ಇದನ್ನು ಎನ್ ಎಸ್ ಯು ಐ ತೀವ್ರವಾಗಿ ಖಂಡಿಸುತ್ತದೆ.

ದೇಶದಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಮುಖ್ಯವಲ್ಲ. ತ್ರಿವರ್ಣ ಧ್ವಜವೇ ಸರ್ವಶ್ರೇಷ್ಠ. ಆದ್ದರಿಂದ ಇಂದು ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ವಿದ್ಯಾರ್ಥಿಗಳು ಹಿಜಾಬ್ ಕೇಸರಿ ಶಾಲು ವಿಚಾರ ಕೈಬಿಡಬೇಕು. ಹಿಂದಿನಂತೆ ತರಗತಿಗಳಲ್ಲಿ ಬ್ರಾತೃತ್ಬ ಭಾವನೆಯಿಂದ ಇರಬೇಕೆಂದು ಹಾಗೂ ವಿದ್ಯಾರ್ಥಿಗಳು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ.ಈ ಸಂದರ್ಭದಲ್ಲಿ NSUI ಕಾರ್ಯಕರ್ತರು ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು.