ಕರ್ನಾಟಕ ಒಲಂಪಿಕ್ ಭವನದಲ್ಲಿ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ನಡೆಸಿದ ವಾರ್ಷಿಕ ಮಹಾಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಿವಮೊಗ್ಗ ವಿನೋದ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಗೋವಿಂದ ರಾಜು ಮತ್ತು ಕರ್ನಾಟಕ ಬಾಕ್ಸಿಂಗ್ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ ತೇಜಸ್ವಿನಿ ಗೌಡ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಚೇರ್ಮನ್ ಹಾಗೂ ಬಾಕ್ಸಿಂಗ್ ಸಂಸ್ಥೆಯ ಉಪಾಧ್ಯಕ್ಷರಾದ ಡಾ ಮಂಜೇಗೌಡ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅನಂತರಾಜು ಮತ್ತು ಬಾಕ್ಸಿಂಗ್ ಸಂಸ್ಥೆ ಅಧ್ಯಕ್ಷರಾದ ಕ್ಯಾಪ್ಟನ್ ಮಾಚಯ್ಯ ಪ್ರಧಾನ ಕಾರ್ಯದರ್ಶಿ ಸಾಯಿ ಸತೀಶ್ ಉಪಸ್ಥರಿದ್ದರು.
ಶಿವಮೊಗ್ಗ ಜಿಲ್ಲೆಯಲ್ಲಿ ಬಾಕ್ಸಿಂಗ್ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು.

ವರದಿ ಮಂಜುನಾಥ್ ಶೆಟ್ಟಿ…