ಶಿವಮೊಗ್ಗ : ವಿದ್ಯಾರ್ಥಿಗಳು ಕ್ರಿಯಾಶೀಲತೆಯೊಂದಿಗೆ ಹೊಸತನದೆಡೆಗೆ ಸಾಗಲು ಉಪನ್ಯಾಸಕರ ಪಾತ್ರ ಮಹತ್ವದಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಅಭಿಪ್ರಾಯಪಟ್ಟರು.

ಇಂದು ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆನ್ಲೈನ್ ಮೂಲಕ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗಾಗಿ 22 ದಿನಗಳ ಕಾಲ ಏರ್ಪಡಿಸಿದ್ದ ಇಂಡಕ್ಷನ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು ಹಲವಾರು ವಿವಿಧ ವಿಷಯಗಳ ಹಿನ್ನಲೆಯಿಂದ ಎಂಜಿನಿಯರಿಂಗ್ ಅಧ್ಯಯನಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳು ಹೊಸ ವಾತಾವರಣಕ್ಕೆ ಮಾನಸಿಕವಾಗಿ ಸಧೃಡಗೊಳ್ಳಲು ಇಂಡಕ್ಷನ್ ಕಾರ್ಯಕ್ರಮ ಪೂರಕವಾಗಲಿದೆ. ಉಪನ್ಯಾಸಕ ವೃಂದ ನೂತನವಾಗಿ ಪ್ರವೇಶಿಸಿದ ವಿದ್ಯಾರ್ಥಿಗಳ ಕುರಿತಾಗಿ ಹೆಚ್ಚು ಕಾಳಜಿ ವಹಿಸಬೇಕಾಗಿದ್ದು ಹೊಸತನದೆಡೆಗೆ ಸಾಗಲು ಪ್ರೇರಣಾ ವಾತಾವರಣ ನಿರ್ಮಾಣ ಮಾಡಿ ಎಂದು ಹೇಳಿದರು.

ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್ ಮಾತನಾಡಿ ಇಂಡಕ್ಷನ್ ಕಾರ್ಯಕ್ರಮಗಳ ಮೂಲಕ ಹಲವು ವಿಭಿನ್ನ ವಿಚಾರಗಳನ್ನು ತಿಳಿಯಲು ವಿದ್ಯಾರ್ಥಿಗಳಿಗೆ ಸಾಧ್ಯವಾಗಲಿದೆ. ಒಂದು ತರಗತಿಯ ಯಶಸ್ಸಿನ ಹಿಂದೆ ಪ್ರತಿ ಉಪನ್ಯಾಸಕರ ಪಾತ್ರ ಮಹತ್ವದ್ದು. ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್ ಕ್ಷೇತ್ರಗಳು ಸಮಾಜಿಕವಾಗಿ ಬಹುಮುಖಿ ಪ್ರಮುಖ ವಿಷಯಗಳಾಗಿದ್ದು ಅಂತಹ ವಿಷಯಗಳ ಅಧ್ಯಯನಕ್ಕೆ ತೆರೆದುಕೊಳ್ಳುವ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ ಮತ್ತಷ್ಟು ಸಧೃಡತೆಯನ್ನು ನೀಡಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಡೀನ್ ಡಾ.ಮಂಜುನಾಥ. ಪಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಎನ್.ಆನಂದರಾಮ್, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಎಂ‌.ಹೆಚ್.ಮೋಯಿನುದ್ದಿನ್ ಖಾನ್ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಕರು, ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…