ಕೊರೋನಾ ಸೋಂಕು ಮತ್ತು ಲಾಕ್ ಡೌನ್ ನಿಂದಾಗಿ ಜನಸಾಮಾನ್ಯರು ಉದ್ಯೋಗವಿಲ್ಲದೆ , ಉದ್ಯಮಿಗಳು ಉತ್ಪಾದನೆ ಇಲ್ಲದೆ ಕಷ್ಟ ನಷ್ಟಕ್ಕೀಡಾಗಿದ್ದಾರೆ . ಇಂತಹ ವಿಪತ್ತು ಪರಿಸ್ಥಿತಿಯಲ್ಲಿ ನೆರವಿಗೆ ಬರಬೇಕಾಗಿದ್ದ ರಾಜ್ಯದ ಬಿ.ಜೆ.ಪಿ . ಸರ್ಕಾರ ನಿರ್ದಯವಾಗಿ ವಿದ್ಯುತ್ ಶುಲ್ಕ ಹೆಚ್ಚಿಸಿ ಹಸಿ ಗಾಯದ ಮೇಲೆ ಬರೆ ಬಿದ್ದಿರುವುದು ತೀವ್ರ ಖಂಡನೀಯ. ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ವಿದ್ಯುತ್ ದರ 200-300 ಪಟ್ಟು ಹೆಚ್ಚಿದೆ .

ವಿದ್ಯುತ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ತಕ್ಷಣ ಹಿಂದಕ್ಕೆ ಪಡೆಯದಿದ್ದರೆ ಯುವ ಕಾಂಗ್ರೆಸ್ ನಿಂದ ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಸುಮಾರು 30 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ . ವಿದ್ಯುತ್ ಬಳಕೆ ಆಗುತ್ತಿರುವುದು ಕೇವಲ 8.5 ಸಾವಿರದಿಂದ 10 ಸಾವಿರ ಮೆಗಾವ್ಯಾಟ್ ಮಾತ್ರ . ರಾಜ್ಯದ ಬಿ.ಜೆ.ಪಿ ಸರ್ಕಾರ ಯೂನಿಟ್ ಗೆ ಹೆಚ್ಚುವರಿ 50 ಪೈಸೆ ನೀಡಿ ಕೇಂದ್ರ ಸರ್ಕಾರದ ವಿದ್ಯುತ್ ಖರೀದಿಸುತ್ತಿದೆ .

ಕಾರ್ಪೊರೇಟ್ ಕಂಪನಿಗಳು ಹಾಗೂ ಕೇಂದ್ರದ ಗ್ರಿಡ್ ಗಳಿಂದ ರಾಜ್ಯ ಸರ್ಕಾರ 38594 ಮಿಲಿಯನ್ ಯೂನಿಟ್ ಗಳನ್ನು ಖರೀದಿಸುತ್ತಿದೆ ಆದರೆ ಬಳಕೆ ಮಾಡುತ್ತಿರುವುದು ಮಾತ್ರ ಕೇವಲ 19921 ಮಿಲಿಯನ್ ಯೂನಿಟ್ ಗಳು .ಇದಕ್ಕಾಗಿ ರಾಜ್ಯ ಸರ್ಕಾರ 4388 ಕೋಟಿ ರುಪಾಯಿಗಳನ್ನು ಪಾವತಿಸುತ್ತಿದೆ. ಒಟ್ಟಾರೆಯಾಗಿ ಲೆಕ್ಕ ಹಾಕಿದರೆ ಎಲ್ಲ ಮೂಲಗಳಿಂದ ಪಾವತಿಸಬೇಕಾದ ಮೊತ್ತ ಕ್ಕಿಂತ 5460 ಕೋಟಿ ರುಪಾಯಿಗಳನ್ನು ಹೆಚ್ಚಿಗೆ ಪಾವತಿಸಲಾಗುತ್ತಿದೆ .ಕಷ್ಟದಲ್ಲಿರುವ ಜನರಿಂದ ಕಿತ್ತುಕೊಂಡು ಕಾರ್ಪೊರೇಟ್ ಕಂಪನಿಗಳನ್ನು ಉದ್ಧಾರ ಮಾಡಲು ರಾಜ್ಯ ಸರ್ಕಾರ ಹೊರಟಿದೆ .ವಿದ್ಯುತ್ ದರಗಳನ್ನು ಹೆಚ್ಚಿಸಬಾರದು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ . ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಅಧ್ಯಕ್ಷರಾದ ಬಿ ಲೋಕೇಶ್ , ದಕ್ಷಿಣ ಬ್ಲಾಕ್ ಎಸ್ ಕುಮರೇಶ್ , ಜಿಲ್ಲಾಧ್ಯಕ್ಷ ಎಚ್ ಪಿ ಗಿರೀಶ್ , E T ನಿತಿನ್ , ಗ್ರಾಮಾಂತರ ಅಧ್ಯಕ್ಷ ರಾದ ನವೀನ್ G P, ರಾಹುಲ್ ಎಂ ಪಾಟೀಲ್ , B ದೇವರಾಜ್ , ವಿನಯ್ , ಮಂಜುನಾಥ್ , ಇತರರು ಉಪಸ್ಥಿತರಿದ್ದರು


ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153