
ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರೀ ಸಂತ ರವಿದಾಸರ 572ನೇ ಜಯಂತಿ ಹಾಗೂ ಶ್ರೀ ಸಂತ ಸೇವಾಲಾಲ್ ಮಹಾರಾಜರ 283ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.



ಜಿಲ್ಲಾ ಎಸ್.ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕಾಸರವಳ್ಳಿ ಶ್ರೀನಿವಾಸ್ ಹಾಗೂ ಸೂಡಾ ಮಾಜಿ ಸದಸ್ಯ ದೇವರಾಜ್ ಮಂಡೆನಕೊಪ್ಪ ಅವರು ಮಾತಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹೃಷಿಕೇಶ್ ಪೈ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಲಕ್ಷ್ಮಿಪತಿ, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ್ ನಾಯ್ಕ್, ನಗರ ಎಸ್.ಸಿ. ಮೋರ್ಚಾ ಅಧ್ಯಕ್ಷ ಯೋಗೇಶ್, ಪ್ರಮುಖರಾದ ಜಗದೀಶ್, ಪ್ರಕಾಶ್, ನೀಲೇಶ ನಾಯ್ಕ ಮೊದಲಾದವರಿದ್ದರು.