ಇಂದು ನಗರದ ಕುವೆಂಪು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ಅವರು ಕೇಂದ್ರ ಸರ್ಕಾರವು ಯಾವುದೇ ಮಿತಿಯಿಲ್ಲದೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರುತ್ತಿದ್ದು ಇದು ಸಾರ್ವಜನಿಕರಿಗೆ ಹೊರೆಯಾಗಲಿದೆ. ಆದ್ದರಿಂದ ನಮ್ಮ ಪಕ್ಷದ ಸೂಚನೆಯಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಹಾಗೂ ಹೋಬಳಿ ಮಟ್ಟದಲ್ಲಿ ದಿನಾಂಕ 15 ಜೂನ್ ತನಕ ಪ್ರತಿಭಟನೆ ನಡೆಯಲಿದೆ. ಈ ಕೂಡಲೇ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕೆಂದು ಆಗ್ರಹಿಸಿದರು.


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153