ಶಿವಮೊಗ್ಗ: ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಲಿಖಿತ ಪರೀಕ್ಷೆ, ವಿಜ್ಞಾನದ ಮಾದರಿ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿರುವ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಜ್ಞಾನದೀಪ ಪ್ರೌಢಶಾಲೆಯ ರ‍್ನವ್, ಸರ್ವೋದಯ ಪ್ರೌಢಶಾಲೆಯ ಯುವ ವಿಜ್ಞಾನಿ ಪವಿತ್ರ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟದಿಂದ ಆಯ್ಕೆಯಾಗಿದ್ದಾರೆ. ಪ್ರಥಮ ಬಹುಮಾನ 5 ಸಾವಿರ ರೂ., ಪ್ರಮಾಣ ಪತ್ರ, ಪಾರಿತೋಷಕ ಹಾಗೂ ದ್ವಿತೀಯ ಬಹುಮಾನ 3 ಸಾವಿರ ರೂ., ಪ್ರಮಾಣ ಪತ್ರ, ಪಾರಿತೋಷಕ ವಿತರಿಸಲಾಯಿತು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಬಿ.ಆರ್.ಬಸವರಾಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಪರಿಸರದಲ್ಲಿ ಸಿಗುವ ವಸ್ತುಗಳನ್ನು ಬಳಸಿ ಹೊಸ ಹೊಸ ಸಂಶೋಧನೆಗಳನ್ನು ಮಾಡಬೇಕು. ಸಮಾಜಕ್ಕೆ ಉಪಯುಕ್ತವಾದ ಮಾದರಿಗಳನ್ನು ರೂಪಿಸಿ ಹೊಸ ಆವಿಷ್ಕಾರಗಳನ್ನು ಮಾಡಬೇಕು. ಇದಕ್ಕೆ ಪೋಷಕರು ಹಾಗೂ ಶಿಕ್ಷಕರು ಸಹಕರಿಸಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ. ಪರಿಸರ ನಾಗರಾಜ್ ಮಾತನಾಡಿ, ವಿಜ್ಞಾನ ಎಲ್ಲರಿಗೂ ಅವಶ್ಯಕ. ವಿಜ್ಞಾನದಲ್ಲಿ ಆಸಕ್ತಿ ಹೆಚ್ಚಿಸುವಂತೆ ಸಲಹೆ ಮಾರ್ಗದರ್ಶನ ನೀಡಬೇಕು. ಈಲ್ಲಾಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶುಭಾಶಯ, ರಾಜ್ಯಮಟ್ಟದಲ್ಲಿಯು ವಿಜೇತರಾಗಲಿ ಎಂದು ಆಶಿಸಿದರು.

ವೇದಿಕೆಯಲ್ಲಿ ಡಾ. ಎಚ್.ಬಿ.ಸುರೇಶ್, ಜಗದೀಶ್, ಫ್ರಾನ್ಸೀಸ್ ಬೆಂಜಮ್, ಗಾಯತ್ರಿ ಪಟೇಲ್, ಡಾ. ರಶ್ಮಿ, ಲೋಕೇಶ್ವರಪ್ಪ, ಜಿ.ವಿಜಯ್‌ಕುಮಾರ್, ಶಂಕರ್‌ಗೌಡ, ವೀಣಾ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸದಸ್ಯರು ಹಾಜರಿದ್ದರು.

ವರದಿ ಮಂಜುನಾಥ್ ಶೆಟ್ಟಿ…