ಶಿವಮೊಗ್ಗ ನಗರದಲ್ಲಿ ನಾಳೆ ಬೆಳಗ್ಗೆ ಯವರೆಗೆ ವಿಧಿಸಿದ ಕರ್ಫ್ಯೂವನ್ನು ಶುಕ್ರವಾರದ ಬೆಳಗ್ಗೆ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವ ಮಣಿ ಆದೇಶಿಸಿದ್ದಾರೆ. ನಗರದ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9ರ ವರಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ನಗರದಲ್ಲಿ ನಿನ್ನೆ ರಾತ್ರಿಯೂ ಸಹ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಮೂರು ಆಟೋ ಮತ್ತು ಒಂದು ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.ಮುಂಜಾಗ್ರತೆ ಕ್ರಮವಾಗಿ ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…