ಶಿವಮೊಗ್ಗ ನಗರದಲ್ಲಿ ಫೆಬ್ರುವರಿ 26ರ ಶನಿವಾರ ಬೆಳಗ್ಗೆ 9 ರಿಂದ ಸಂಜೆ 4ರ ವರಗೆ ಅಂಗಡಿ ಮತ್ತು ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಶನಿವಾರವೂ ಸಹ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಸೋಮವಾರದಿಂದ ಶಾಲಾ ಕಾಲೇಜು ಪುನ್ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಾರ್ವಜನಿಕರು ಯಾವುದೇ ತರಹದ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಎಂದು ತಿಳಿಸಿದರು.

ವರದಿ ಮಂಜುನಾಥ್ ಶೆಟ್ಟಿ…