ಶಿವಮೊಗ್ಗ ನಗರದ ಹರಕೆರೆಯ ಶ್ರೀ ರಾಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.

ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಮತ್ತು ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನ ಆಡಳಿತ ಮಂಡಳಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ಭಕ್ತಾದಿಗಳು ಸಹಕಾರ ನೀಡಬೇಕೆಂದು ಆಡಳಿತ ಮಂಡಳಿಯವರು ವಿನಂತಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…