ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರ ತನಕ 144 ಸೆಕ್ಷನ್ ಮುಂದುವರಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.
ವ್ಯಾಪಾರದ ಸಮಯವನ್ನು ಬೆಳಿಗ್ಗೆ 6 ರಿಂದ ಸಂಜೆ 7ರ ವರೆಗೆ ಅವಕಾಶ ನೀಡಲಾಗಿದೆ. ಸಂಜೆ 7 ರಿಂದ ಬೆಳಗ್ಗೆ 6ರ ವರೆಗೆ ಆಸ್ಪತ್ರೆ ಮತ್ತು ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.