ಮುಗಿಲು ಮುಟ್ಟಿದ ಹರ್ಷೋದ್ಗಾರ,ಹರಿದು ಬಂದ ಜನಸಾಗರ.

ಬೆಂಗಳೂರು ನಗರ ಜನರ ಕುಡಿಯುವ ನೀರಿಗಾಗಿ 5ನೇ ದಿನದ ಮೇಕೆದಾಟು ಪಾದಯಾತ್ರೆ.

ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ ರವರು ಮತ್ತು ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯರವರು ,ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರುನಗರ ಜನರ ಕುಡಿಯುವ ನೀರಿಗಾಗಿ ಮೇಕೆದಾಟುವಿನಿಂದ ಆರಂಭ ಪಾದಯಾತ್ರೆ ಇಂದು ಅಂತಿಮ ದಿನ ಅರಮನೆ ಮೈದಾನದಿಂದ ಸಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಪಾದಯಾತ್ರೆ ಮೂಲಕ ಸಾಗಿದರು.

ಬೆಂಗಳೂರು ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ.

ಕಾಂಗ್ರೆಸ್ ಬಾವುಟ ,ಕನ್ನಡ ಬಾವುಟ ಕೈಯಲ್ಲಿ ಹಿಡಿದ ಕಾಂಗ್ರೆಸ್ ಕಾರ್ಯಕರ್ತರಿಂದ ನಮ್ಮ ನೀರು ನಮ್ಮ ಹಕ್ಕು ಎಂದು ಘೋಷಣೆಗಳನ್ನು ಕೂಗುತ್ತಾ ಸಾಗಿದರು.

ಶಾಸಕರು,ಮಾಜಿ ಸಚಿವರು ಸಾವಿರಾರು ಕಾರ್ಯಕರ್ತರು ಭಾಗಿ.

ಸಂಗೊಳ್ಳಿ ರಾಯಣ್ಣ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಕುವೆಂಪುರವರ ಪ್ರತಿಮೆ ಮಾಲಾರ್ಪಣೆ ಮಾಡಿ ಪಾದಯಾತ್ರೆ ಮುಂದುವರಿಸಿದರು.

ಕಂಸಾಳೆ,ವೀರಗಾಸೆ,ಕೀಲು ಕುದುರೆ ವಿವಿಧ ಜಾನಪದ ಕಲಾ ತಂಡಗಳಿಂದ ಅದ್ದೂರಿಯಾಗಿ ಸಾಗಿತು.

ವರದಿ ಮಂಜುನಾಥ್ ಶೆಟ್ಟಿ…