ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿ ಇಂದು ಸುಶಾಸನ ಭವನ ನಿರ್ಮಾಣ ಹಾಗೂ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನಾ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನೆರವೇರಿಸಿದರು.

ಈ ವೇಳೆ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಉಪ ಮೇಯರ್ ಕೆ. ಶಂಕರ್, ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರಾದ ಸುವರ್ಣಾ ಶಂಕರ್, ರೇಖಾ ರಂಗನಾಥ್, ಹೆಚ್.ಸಿ. ಯೋಗೀಶ್, ಪ್ರಭು, ಇ. ವಿಶ್ವಾಸ್, ರಾಹುಲ್ ಬಿದರೆ, ಶಿವಕುಮಾರ್, ಆಯುಕ್ತ ಮಾಯಣ್ಣಗೌಡ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…