ಶಿವಮೊಗ್ಗ: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಮಾಜಿ ಮುಖ್ಯಮಂತ್ರಿ ಶರಣ ಬಿ.ಎಸ್. ಯಡಿಯೂರಪ್ಪನವರಿಗೆ 2019 -20 ನೇ ಸಾಲಿನ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ. 6 ರಂದು ಬೆಳಗ್ಗೆ 10.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎನ್. ಸಜ್ಜನ್ ಹೇಳಿದರು.
ಅವರು ಇಂದು ಬಸವಕೇಂದ್ರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಪ್ರತಿಮ ರಾಜಕೀಯ ಮುತ್ಸದ್ಧಿಯಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ರೈತಪರ ಹೋರಾಟಗಳನ್ನು ಮಾಡಿದ್ದಾರೆ. ಅವರಿಗೆ ಕೆಳದಿ ಶಿವಪ್ಪನಾಯಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದರು.ಶಿವಪ್ಪನಾಯಕ ಪ್ರಶಸ್ತಿಯನ್ನು ಈಗಾಗಲೇ 5 ಜನರಿಗೆ ನೀಡಿದ್ದೇವೆ. ಇದೇ ಮೊದಲ ಬಾರಿಗೆ ರಾಜಕೀಯ ವ್ಯಕ್ತಿಯೊಬ್ಬರಿಗೆ ನೀಡುತ್ತಿರುವುದಾಗಿ ತಿಳಿಸಿದ ಅವರು, ಕಾರ್ಯಕ್ರಮದ ಸಾನಿಧ್ಯವನ್ನು ಬೆಕ್ಕಿನ ಕಲ್ಮಠದ ಡಾ.ಶ್ರೀ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ, ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ, ಬಸವಕೇಂದ್ರ ಡಾ. ಬಸವಮರುಳಸಿದ್ಧ ಮಹಾಸ್ವಾಮಿ ವಹಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ಸಾಹಿತಿ ಡಾ.ಗೋ.ರು. ಚನ್ನಬಸಪ್ಪ ಅಭಿನಂದನಾ ನುಡಿಗಳನ್ನಾಡುವರು ಎಂದರು.
ಮುಖ್ಯ ಅತಿಥಿಗಳಾಗಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಬಿ.ಕೆ. ಸಂಗಮೇಶ್, ಅಶೋಕ್ ನಾಯ್ಕ್, ಕುಮಾರ್ ಬಂಗಾರಪ್ಪ, ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಮಹಾಸಭಾದ ರಾಜ್ಯ ಉಪಾಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಸಿ.ಎಸ್. ಪರಮಶಿವಯ್ಯ, ಮಹಾಸಭಾದ ಕಾರ್ಯದರ್ಶಿ ರೇಣುಕಾಪ್ರಸನ್ನ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಮಹಾಸಭಾದ ಮಹಿಳಾ ಘಟಕದ ರಾಜ್ಯಾಧ್ಯಕ್ಷ ಎಸ್.ವೈ. ಅರುಣಾದೇವಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಸೂಡಾ ಅಧ್ಯಕ್ಷ ಎನ್.ಜಿ. ನಾಗರಾಜ್ ಉಪಸ್ಥಿತರಿರುವರು ಎಂದರು.
ಇವರ ಜೊತೆಗೆ ಪ್ರಮುಖರಾದ ಡಾ.ಬಿ.ಡಿ. ಭೂಕಾಂತ್, ಡಿ.ಸಿ. ನಂಜುಂಡಶೆಟ್ಟಿ, ಜಗದೀಶ್, ಎಸ್.ಎಸ್. ಜ್ಯೋತಿಪ್ರಕಾಶ್, ಎನ್.ಜೆ. ರಾಜಶೇಖರ್, ನಿವೇದಿತಾ ರಾಜು, ಡಿ. ಬೆನಕಪ್ಪ, ಹೆಚ್.ಸಿ. ಯೋಗೀಶ್, ಎಸ್.ಎನ್. ಚನ್ನಬಸಪ್ಪ, ಇ. ವಿಶ್ವಾಸ್, ಅನಿತಾ ರವಿಶಂಕರ್, ಮಂಜುನಾಥ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಿವಯೋಗಿ ಹಂಚಿನಮನೆ, ಪ್ರಮುಖರಾದ ಆನಂದಮೂರ್ತಿ, ಬಸವನಗೌಡ, ಎಸ್. ರಾಜಶೇಖರ್, ಚಂದ್ರಶೇಖರ್, ಮಹೇಶ್ ಮೂರ್ತಿ ಮತ್ತಿತರರು ಇದ್ದರು.ಬಾಕ್ಸ್ಬಿ.ಎಸ್.ವೈ.ಗೆ ವಿಶೇಷ ಪೇಟಕೆಳದಿ ಶಿವಪ್ಪನಾಯಕ ಆಡಳಿತ ನಡೆಸುವಾಗ ಧರಿಸುತ್ತಿದ್ದ ಪೇಟದ ಮಾದರಿಯಲ್ಲೇ ವಿಶೇಷ ಪೇಟವನ್ನು ತಯಾರಿಸಲಾಗಿದ್ದು, ಅದನ್ನು ನಾಳಿನ ಸಮಾರಂಭದಲ್ಲಿ ಬಿ.ಎಸ್. ಯಡಿಯೂರಪ್ಪನವರಿಗೆ ತೊಡಿಸಲಾಗುವುದು ಎಂದು ರುದ್ರಮುನಿ ಸಜ್ಜನ್ ಹೇಳಿದ್ದಾರೆ.