ಮುಖ್ಯ ಮಂತ್ರಿಗಳು ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಶಾಸಕರ ಜೊತೆ ಕೋವಿಡ ಬಗ್ಗೆ ಸಭೆ ನಡೆಸಿದರು. ಮುಖ್ಯಮಂತ್ರಿಗಳೊಂದಿಗೆ ಸಭೆ ಯಲ್ಲಿ ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್ , ವೈದ್ಯಕೀಯ ಶಿಕ್ಷಣ ಸಚಿವರಾದ ಕೆ ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಕೆ ಎಸ್ ಈಶ್ವರಪ್ಪ ಭಾಗವಹಿಸಿದ್ದು ವಿಶೇಷವಾಗಿತ್ತು. ಸಭೆ ನಂತರ ಮಾತನಾಡಿದ ಮುಖ್ಯಮಂತ್ರಿಗಳು ಮೊದಲ ಆದ್ಯತೆ ಶಿವಮೊಗ್ಗದಲ್ಲಿ ಪಾಸಿಟಿವಿಟಿ ರೇಟ್ 5%ಗಿಂತ ಕಡಿಮೆ ಮಾಡಬೇಕು ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು. ಇಂದು ಬೆಳಿಗ್ಗೆಯಿಂದ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಹಾಗೂ ಈಶ್ವರಪ್ಪನವರು ಶಿವಮೊಗ್ಗ ನಗರದಲ್ಲಿ ಸುತ್ತಾಡಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ್ದಾರೆ.

ಸಿಗಂದೂರು ಸೇತುವೆ ಯನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ . ಶಿವಮೊಗ್ಗದಲ್ಲಿ ಒಂದುಕಾಲು ವರ್ಷದೊಳಗೆ ಏರ್ ಪೋರ್ಟ್ ಕಾರ್ಯಾರಂಭ ಮಾಡಬೇಕು ಆಗ ಶಿವಮೊಗ್ಗದಲ್ಲಿ ಹೆಚ್ಚು ಉದ್ಯಮಿಗಳು ತಲೆ ಎತ್ತುತ್ತಿವೆ ಇದರಿಂದ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತದೆ ಎಂದು ಹೇಳಿದರು. ಏರ್ ಪೋರ್ಟ್ ಕಾಮಗಾರಿಗೆ ಹಣಕಾಸಿನ ಕೊರತೆ ಇಲ್ಲ ಎಂದು ತಿಳಿಸಿದರು. ಇನ್ನು 1ವರ್ಷದಲ್ಲಿ ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುತ್ತೇವೆ ಎಂದು ಹೇಳಿದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153