ರಾಜ್ಯದ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ನವರು ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೋಳಗಾದ ಸಕ್ರಿಯ ಹಿಂದು ಕಾರ್ಯಕರ್ತ ದಿ.ಹರ್ಷ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನವನ್ನು ನೀಡಿ ರಾಜ್ಯ ಸರ್ಕಾರದಿಂದ ಬಂದ 25 ಲಕ್ಷ ರೂ ಗಳ ಪರಿಹಾರ ನೀಡಿದರು.ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ. ಎಸ್. ಈಶ್ವರಪ್ಪನವರು, ಸಂಸದರಾದ ಬಿ. ವೈ. ರಾಘವೇಂದ್ರ ಅವರು ಮತ್ತಿತರ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.