ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತಡೆಗಟ್ಟಲು ಅಭಿಯಾನ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಹೇಳಿದರು.
ದೇಶದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡ ಬಾಲ್ಯ ವಿವಾಹಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಸಂಪೂರ್ಣವಾಗಿ ಇದನ್ನು ತಡೆಗಟ್ಟುವ ಸಲುವಾಗಿ ‘ವಿಡಿಯೋ ಆನ್ ವೀಲ್ಸ್ ವಾಹನ’Àದ ಮುಖಾಂತರ ಬಾಲ್ಯ ವಿವಾಹ ನಿಷೇಧ ಜಾಗೃತಿ ಅಭಿಯಾನ ಕೈಗೊಂಡಿರುವುದು ಉತ್ತಮ ಹೆಜ್ಜೆಯಾಗಿದೆ ಎಂದು ಹೇಳಿದರು.

ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ, ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಬಾಲ್ಯ ವಿವಾಹ ನಿಷೇಧ ಅಭಿಯಾನ ಕುರಿತು ‘ವಿಡಿಯೋ ಆನ್ ವೀಲ್’್ಸ ವಾಹನಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯ ಕುಂಠಿತಗೊಳ್ಳುತ್ತಿದ್ದು, ಈ ಪದ್ದತಿ ಸಮಾಜಕ್ಕೆ ಮಾರಕವಾಗಿದೆ. ಆದ್ದರಿಂದ ಸರ್ಕಾರ ರಾಜ್ಯದ ಎಲ್‍ಲ್ಲ ಭಾಗದಲ್ಲಿಯು ಏಕ ಕಾಲದಲ್ಲಿ ವಿನೂತನವಾಗಿ ವಾಹನದಲ್ಲಿ ಬಾಲ್ಯ ವಿವಾಹÀ ನಿಷೇಧದ ಕುರಿತು ವಿಡಿಯೋ ಪ್ರದರ್ಶನ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ವ್ಯಾಪಕವಾದ ಅರಿವು ಮೂಡಿಸುತ್ತಿದೆ.

ಈ ಜಾಗೃತಿ ಅಭಿಯಾನವು 30 ದಿನಗಳ ಕಾಲ ನಡೆಯಲಿದ್ದು ಜಿಲ್ಲೆಯಲ್ಲಿನ 41 ಹೋಬಳಿಯ ಎಲ್ಲಾ ಶಾಲಾ, ಕಾಲೇಜು, ಹಾಸ್ಟೆಲ್‍ಗಳಲ್ಲಿ ವೀಡಿಯೋ ಆನ್ ವೀಲ್ಸ್ ವಾಹನದ ಮೂಲಕ ಬಾಲ್ಯ ವಿವಾಹದ ಬಗ್ಗೆ ದಿನಕ್ಕೆ 5 ಪ್ರದರ್ಶನದಂತೆ ತಿಂಗಳಿಗೆ 150 ಪ್ರದರ್ಶನ ನೀಡಲಾಗುವುದು ಎಂದು ತಿಳಿಸಿದರು.
ಬಾಲ್ಯ ವಿವಾಹ ತಡೆಗಟ್ಟುವುದು ಕೇವಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೀಮಿತವಾಗಿಲ್ಲ ಬದಲಿಗೆ ಜನಪ್ರತಿನಿಧಿಗಳು, ಸಾರ್ವಜನಿಕರು ಸೇರಿದಂತೆ ಗ್ರಾಮ ಮಟ್ಟದಿಂದ ಉನ್ನತ ಮಟ್ಟದವರೆಗೆ ಎಲ್ಲ ಸಮಾಜ ಸೇವಕರು ಒಟ್ಟಾಗಿ ಈ ಬಾಲ್ಯ ವಿವಾಹವನ್ನ ಸಂಪೂರ್ಣವಾಗಿ ತಡೆಗಟ್ಟಬೇಕಿದೆ ಎಂದರು.
ಪಾಲಿಕೆ ಮಹಾಪೌರರಾದ ಸುನಿತಾ ಅಣ್ಣಪ್ಪ ಟೇಪ್ ಕತ್ತರಿಸುವ ಮೂಲಕ ‘ವಿಡಿಯೋ ಆನ್ ವೀಲ್ಸ್’ ವಾಹನಕ್ಕೆ ಚಾಲನೆ ನೀಡಿದರು.

“ಬಾಲ್ಯ ವಿವಾಹದಿಂದ ಹೆಣ್ಣು ಮಕ್ಕಳ ಶಿಕ್ಷಣ ಕುಂಟಿತವಾಗಿ ಅವರ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ಅಭಿವೃದ್ಧಿ ಹೊಂದುವ ಹಕ್ಕು, ಭಾಗವಹಿಸುವಿಕೆಯ ಹಕ್ಕು ಉಲ್ಲಂಘನೆಯಾಗುತ್ತದೆ. ಆದ್ದರಿಂದ ಎಲ್ಲರು ಕೂಡ ಬಾಲ್ಯ ವಿವಾಹವನ್ನು ತಡೆಗಟ್ಟಿ ಮುಕ್ತ ಸಮಾಜ ನಿರ್ಮಿಸಲು ಬದ್ಧನಾಗಿರುತ್ತೇವೆ” ಎಂಬ ಪ್ರತಿಜ್ಞಾ ವಿಧಿಯನ್ನು ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ಬೋಧಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಮುಖ್ಯರಸ್ತೆಯಲ್ಲಿ ಸ್ವ-ಸಹಾಯ ಸಂಘದ ಮಹಿಳೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆರು, ಮಹಿಳಾ ಹೋರಾಟಗಾರರು ಮಾನವ ಸರಪಳಿ ನಿರ್ಮಿಸುವ ಮೂಲಕ ಬಾಲ್ಯ ವಿವಾಹ ನಿಷೇಧದ ಬಗ್ಗೆ ವಿಶೇಷವಾಗಿ ಜಾಗೃತಿ ಮೂಡಿಸಿ, ಬಾಲ್ಯವಿವಾಹ ನಿಷೇಧ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ಸಹಿ ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಿ.ಜಿ.ಸುರೇಶ್ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…