ಶಿವಮೊಗ್ಗ: ಪತ್ರಕರ್ತರಾದ ಜೇಸುದಾಸ್, ಥಾಮಸ್ ಪಿ. ಅವರ ತಾಯಿ ಜಯಮ್ಮ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ.
ಮೃತರಿಗೆ ಮೂವರು ಪುತ್ರರು ಮತ್ತು ಮೂವರು ಪುತ್ರಿಯರಿದ್ದು, ಅಪಾರ ಬಂಧು ಬಳಗ ಅಗಲಿದ್ದಾರೆ.ಪುತ್ರ ಅಮೆರಿಕದಿಂದ ಬರಬೇಕಿರುವ ಹಿನ್ನಲೆಯಲ್ಲಿ ಮೃತರ ಅಂತಿಮ ಕ್ರಿಯೆಯು ಬುಧವಾರ ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯ ಅವಧಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.