ಹೊರಗುತ್ತಿಗೆ ನೀರು ಸರಬರಾಜು ನೌಕರರಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರದ ಮಹತ್ವದ ಯೋಜನೆ 24/7 ನಿರಂತರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣ ವಿಭಾಗದಲ್ಲಿ 124 ನೌಕರರು ಸುಮಾರು 15-20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ.
ಸಾರ್ವಜನಿಕರ ಮೂಲಭೂತ ಸೌಕರ್ಯಗಳಲ್ಲಿ ಬಹುಮುಖ್ಯವಾದ ನೀರು ಸರಬರಾಜು ಘಟಕದಲ್ಲಿ ಹಗಲು ಮತ್ತು ರಾತ್ರಿ ಪಾಳ್ಯದಲ್ಲಿ, ಹಬ್ಬದ ದಿನಗಳಲ್ಲಿ ವಿಶೇಷವಾಗಿ ಕರೋನಾ ಮಹಾಮಾರಿ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
ಆದ್ದರಿಂದ ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಕಾಯಂಗೊಳಿಸಬೇಕು ಈ ಮೂಲಕ ವಿನಂತಿಸಿ ಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಿತಿನ್ , ಅಭಿಲಾಶ್ ಶೆಟ್ಟಿ, ಪವನ್, ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.