ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಇಂದು ಶಿವಮೊಗ್ಗ ನಗರದಲ್ಲಿ ಮಾಜಿ ಶಾಸಕ ಶ್ರೀ ಕೆ ಬಿ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಮತ್ತು ಬಿದಿ ಬದಿ ವ್ಯಾಪಾರ ನಡೆಸುತ್ತ ತಮ್ಮ ಜೀವನ ಕಟ್ಟಿಕೊಂಡಿರುವ ಶ್ರಮಿಕರಿಗೆ ಶಾಲು ಹೊದಿಸಿ ಸನ್ಮಾನಿಸಿ ಸೀರೆ ವಿತರಿಸಲಾಯಿತು.
ಇದೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆದ ಶ್ರೀಮತಿ ಅನಿತಾ ಕುಮಾರಿ, ಮಹಿಳಾ ಮುಖಂಡರುಗಳಾದ ಶ್ರೀಮತಿ ಸುವರ್ಣ ನಾಗರಾಜ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಪಾಲಿಕೆ ಸದಸ್ಯ ಯೋಗೀಶ್, ನಗರಪಾಲಿಕೆ ಮಾಜಿ ಸದಸ್ಯರಾದ ದೀಪಕ್ ಸಿಂಗ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.