ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ನಗರದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾಮಗಾರಿ ಪೂರ್ಣಗೊಂಡ ಸ್ಥಳಗಳಲ್ಲಿ ಹಾಗೂ ಶಿವಮೊಗ್ಗ ನಗರದ ಪ್ರಮುಖ ತಾಣಗಳು ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸಿರುವ ನಾಮಫಲಕಗಳಲ್ಲಿ ಇಂಗ್ಲಿಷ್ ಭಾಷೆಗೆ ಮೊದಲ ಆದ್ಯತೆ ನೀಡಲಾಗಿದ್ದು ನಂತರ ಕನ್ನಡ ಭಾಷೆಯಲ್ಲಿ ಬರೆದಿದ್ದು ಖಂಡನೀಯ ಎಂದು ಪ್ರತಿಭಟಿಸಿದರು.
ಸ್ಮಾರ್ಟ್ ಸಿಟಿ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲು ಪ್ರಾಮುಖ್ಯತೆ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಕೂಡಲೇ ಕರ್ನಾಟಕ ನಾಡು ರಕ್ಷಣಾ ವೇದಿಕೆ ಮನವಿಯಂತೆ ನಾಮಫಲಕಗಳನ್ನು ಬದಲಾಯಿಸಬೇಕು ಎಂದು ಆಗ್ರಹಿಸಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಉಮೇಶ್ ಗೌಡ್ರು ಜಿಲ್ಲಾಧ್ಯಕ್ಷರಾದ ದಿನೇಶ ಜಿಲ್ಲಾ ಉಪಾಧ್ಯಕ್ಷರಾದ ಕುಬೇರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ ಜಿಲ್ಲಾ ಗೌರವಾಧ್ಯಕ್ಷ ಮಲ್ಲೇಶ್ ತಾಲೂಕ್ ಹಾಗೂ ನಗರ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.