ಇಂದು ವಿವಿಧ ಸಂಘ ಸಂಸ್ಥೆಗಳ ಜತೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಸ್ ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಾಳೆಯಿಂದ ಅಗತ್ಯ ವಸ್ತುಗಳ ಖರೀದಿಯ ಸಮಯವನ್ನು 6ರಿಂದ 9ಗಂಟೆವರೆಗೆ ಪರಿಷ್ಕರಿಸಲಾಗಿದೆ ಎಂದು ತಿಳಿಸಿದರು. ಮದ್ಯ ಮಾರಾಟಕ್ಕೆ 1ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ. ಬಟ್ಟೆ ಅಂಗಡಿ ಹಾಗೂ ಬಂಗಾರದ ಅಂಗಡಿಗಳು ತೆರೆಯುವಂತಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ ಎಂದು ತಿಳಿಸಿದರು. ಹೋಲ್ ಸೇಲ್ ಅಡಿಕೆ ಮಂಡಿಗಳಿಗೆ ಮಧ್ಯಾಹ್ನ ಹನ್ನೆರಡು ಗಂಟೆಗೆ ವ್ಯವಹಾರ ನಡೆಸಲು ಅವಕಾಶ ಕಲ್ಪಿಸಿ ಕೆಲಸಗಾರರಿಗೆ ಪಾಸ್ ನೀಡುವ ವ್ಯವಸ್ಥೆ ಮಾಡಲಾಗುತ್ತದೆ. ಆದರೆ ಈ ಪಾಸ್ ಉಪಯೋಗಿಸಿಕೊಂಡು ಹನ್ನೆರಡು ಗಂಟೆಯ ನಂತರ ಅವರು ಸಂಚರಿಸುವಂತಿಲ್ಲ ಎಂದರು. ಸಭೆಯಲ್ಲಿ ಆಯನೂರು ಮಂಜುನಾಥ್, ರುದ್ರೇಗೌಡ್ರು, ಪ್ರಸನ್ನ ಕುಮಾರ್, ಆರಗ ಜ್ಞಾನೇಂದ್ರ, ಅಶೋಕ್ ನಾಯ್ಕ್, ಜಿಲ್ಲಾಧಿಕಾರಿಗಳಾದ ಕೆ ವಿ ಶಿವಕುಮಾರ್ ಜಿಲ್ಲಾ ರಕ್ಷಣಾಧಿಕಾರಿ ಗಳಾದ ಲಕ್ಷ್ಮೀಪ್ರಸಾದ್ ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶಿವಮೊಗ್ಗ