ಶಿವಮೊಗ್ಗ: ಕೆನರಾ ಬ್ಯಾಂಕ್ ಕಾರ್ಯಾಲಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೆನರಾ ಉತ್ಸವವನ್ನು ಪ್ರಾದೇಶಿಕ ಕಚೇರಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಎದುರು ಹಮ್ಮಿಕೊಳ್ಳಲಾಗಿತ್ತು.

ಮಹಿಳಾ ಉದ್ಯಮಿಗಳಿಂದ ತಯಾರಿಸಲ್ಪಟ್ಟ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟದ ಉತ್ಸವವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಉದ್ಘಾಟಿಸಿ ಮಾತನಾಡಿದ ಅವರು, ಕೆನರಾ ಬ್ಯಾಂಕ್ ಸ್ವ ಉದ್ಯೋಗಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಮಹಿಳೆಯರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದರು. ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳಿಗೆ ಬೇಡಿಕೆ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಂಡಿರುವುದು ತುಂಬಾ ಸಂತಸ ತಂದಿದೆ. ಆರ್ಥಿಕವಾಗಿ ಕೂಡ ಮಹಿಳೆಯರನ್ನು ಸದೃಢಗೊಳಿಸುವ ಈ ಕಾರ್ಯಕ್ರಮ ಅನೇಕ ಕುಟುಂಬಗಳಿಗೆ ದಾರಿ ದೀಪವಾಗಲಿದೆ.

ಇದೊಂದು ಸದಾವಕಾಶವಾಗಿದೆ. ಜಿಲ್ಲಾ ಪಂಚಾಯಿತಿಯಿಂದ ಕೂಡ ಅಮೆಜಾನ್ ನಂತಹ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಕರಕುಶಲ ವಸ್ತುಗಳ ಮಾರಾಟಕ್ಕೆ ಒಂದು ಉತ್ತಮ ವೇದಿಕೆಯಾಗಿದೆ ಎಂದರು.ಕೆನರಾ ಉತ್ಸವದಲ್ಲಿ ಮಹಿಳೆಯರಿಂದ ತಯಾರಿಸಿದ ಸಿದ್ದ ಉಡುಪುಗಳು, ಕರಕುಶಲ ವಸ್ತುಗಳು ಆಹಾರ ಪದಾರ್ಥಗಳು ಗ್ರಾಮೀಣ ಉತ್ಪನ್ನಗಳು ಹಾಗೂ ಮುಂತಾದ ಹಲವಾರು ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಇರುತ್ತದೆ ಎಂದರು.ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಎಜಿಎಂ ಪೂರ್ಣಿಮಾ ಎನ್. ರಾವ್, ಪ್ರಾದೇಶಿಕ ಕಚೇರಿ ಶಿವಮೊಗ್ಗದ ಉಪ ಮಹಾಪ್ರಬಂಧಕ ಸಂದೀಪ್ ರಾವ್ ಬ್ಯಾಂಕಿನ ಅಧಿಕಾರಿಗಳು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…