ನರೇಂದ್ರ ಮೋದಿಯವರ ಸರ್ಕಾರ COVID_19 ಸಂಕಷ್ಟದ ನಡುವೆಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುವ ಮೂಲಕ ಜನ ಸಾಮಾನ್ಯರ ಸುಲಿಗೆ ಮಾಡುತ್ತಿದ್ದು ಅಚ್ಛೇ ದಿನಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನರ ಬದುಕು ದುಸ್ತರವಾಗಿಸಿದೆ .ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ತೈಲ ಬೆಲೆ ಇಳಿಕೆ ಆಗಲಿದೆ ಎಂದು ಜನರನ್ನು ನಂಬಿಸಿ ಈಗ ನೂರರ ಗಡಿ ದಾಟಿಸಿ ದಾಖಲೆ ಮಾಡಿದೆ . ಬಿಜೆಪಿ ಸರ್ಕಾರ ಜನರಿಗೆ ನಂಬಿಕೆಯನ್ನು ಹುಸಿ ಮಾಡಿ ತೈಲ ಬೆಲೆ ನಿರಂತರವಾಗಿ ಏರಿಕೆ ಮಾಡುವ ಮೂಲಕ ಜನರಿಗೆ ಜನರನ್ನು ಸಂಕಷ್ಟಕ್ಕೆ ದೂಡಿದೆ .ಯುಪಿಎ ಸರ್ಕಾರ ಇದ್ದಾಗ ಕಚ್ಚಾ ತೈಲ ಬೆಲೆ ಈಗಿನ ಬೆಲೆಗಿಂತ ಅತೀ ಹೆಚ್ಚಿದ್ದರೂ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 60 ರ ಆಸುಪಾಸಿನಲ್ಲಿತ್ತು .ಆದರೆ ಎನ್ ಡಿಎ ಸರ್ಕಾರ ಬಂದ ನಂತರ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದರೂ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿಸಿದೆ .ಡೀಸೆಲ್ ಬೆಲೆ ಶತಕದ ಅಂಚಿನಲ್ಲಿದ್ದ .ಮೊದಲೇ COVID ಲಾಕ್ ಡೌನ್ ಸುಳಿಗೆ ಸಿಲುಕಿ ದೈನಂದಿನ ಜೀವನ ನಡೆಸುವುದೇ ಕಷ್ಟಕರವಾಗಿರುವಾಗ ತೈಲ ಬೆಲೆ ಏರಿಕೆಯಿಂದ ಜನರು ದಿಕ್ಕು ತೋಚದಂತಾಗಿದೆ .ತೈಲ ಬೆಲೆ ಏರಿಕೆಯಿಂದಾಗಿ ಇತರ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ .ಸರ್ಕಾರ ಸುಳ್ಳು ಆಶ್ವಾಸನೆಗಳನ್ನು ನೀಡಿ ಬಡವರು ನರಳುವಂತಾಗಿದೆ.
ಇದನ್ನು ಖಂಡಿಸಿ ಹಸೂಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ನಿದಿಗೆ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರಾದ ಶ್ರೀಮತಿ ವೇದಾವಿಜಯಕುಮಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕರಾದ ಆರ್,ವಿಜಯಕುಮಾರ್(ದನಿ) ಸಂತೇಕಡೂರುರವರು,ಮುಖಂಡರಾದ ಶ್ರೀನಿವಾಸ್ ಕರಿಯಣ್ಣನವರು, ಯುವ ಮುಖಂಡರಾದ ಶರತ್-ಮರಿಯಪ್ಪನವರು,ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ ಮಂಜುನಾಥ್ ಶಿವಮೊಗ್ಗ