ಆಗುಂಬೆ ನ್ಯೂಸ್…

ಕೆನರಾ ತಾಂತ್ರಿಕ ಮಹಾವಿದ್ಯಾಲಯ, ಮಂಗಳೂರು ಹಾಗೂ ಲಯನ್ಸ್ ಕ್ಲಬ್, ಆಗುಂಬೆ ಜಂಟಿ ಸಹಯೋಗದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕೆಂದಾಳಬೈಲಿನಲ್ಲಿ ರೈತರಿಗೆ ಅಡಿಕೆ ಒಣಗಿಸುವ ಉಪಕರಣದ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ನೀಡಲಾಯಿತು.

ಕೆನರಾ ತಾಂತ್ರಿಕ ಮಹಾವಿದ್ಯಾಲಯದ ಉತ್ಪನ್ನ ಅಭಿವೃದ್ಧಿ ತಂಡ ವಿನ್ಯಾಸ ಮಾಡಿರುವ ಈ ಉಪಕರಣವು ಸುಧಾರಿತ ತಂತ್ರಜ್ಞಾನವನ್ನು ಹೊಂದಿದ್ದು ಅಡಿಕೆ, ಕಾಳುಮೆಣಸು, ಏಲಕ್ಕಿ, ಕೊಬ್ಬರಿ ಇತ್ಯಾದಿ ಕೃಷಿ ಉತ್ಪನ್ನಗಳನ್ನು ಸುಲಭವಾಗಿ ಮತ್ತು ಕಡಿಮೆ ಶ್ರಮದೊಂದಿಗೆ ಒಣಗಿಸಲು ಸಹಕಾರಿಯಾಗಿದ್ದು ರೈತರಿಗೆ ಅನುಕೂಲಕರವಾಗಿದೆ.

ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ಸಂದೀಪ್ ಎಸ್, ವಿನೋದ್ ಕುಮಾರ್ ಎಂ ವಿ, ನಾರಾಯಣ ಸ್ವಾಮಿ ಉಪಕರಣದ ಬಳಕೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಲಯನ್ಸ್ ಕ್ಲಬ್ ಆಗುಂಬೆ ಘಟಕದ ಅಧ್ಯಕ್ಷರಾದ ಸುಧೀಂದ್ರ ಮಲ್ಯ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ರವೀಶ್ ಲಯನ್ ಹಸಿರುಮನೆ ಮಹಾಬಲೇಶ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕೆನರಾ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಆಗುಂಬೆಯ ಎಸ್ ವಿ ಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕಗಳನ್ನು ವಿತರಿಸಲಾಯಿತು.ಹಾಗೂ ಅನ್ನಪೂರ್ಣ ವಿದ್ಯಾಮಂದಿರದ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ನಂತರದ ಶೈಕ್ಷಣಿಕ ಹಾಗೂ ಉದ್ಯೋಗ ಸಂಬಂಧಿತ ಅವಕಾಶಗಳ ಬಗ್ಗೆ ಉಪನ್ಯಾಸ ನೀಡಲಾಯಿತು.

ವರದಿ ಮಂಜುನಾಥ್ ಶೆಟ್ಟಿ…