ಶಿವಮೊಗ್ಗ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ ಮತ್ತು ಮಣಿಪುರ ರಾಜ್ಯದಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ. ರಾಘವೇಂದ್ರ ಅವರು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಭಾನುಪ್ರಕಾಶ್, ಗಣೇಶ್ ರಾವ್, ಸಣ್ಣ ಕೈಗಾರಿಕಾ ನಿಗಮದ ರಾಜ್ಯ ಉಪಾಧ್ಯಕ್ಷ ದತ್ತಾತ್ರಿ, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವರಾಜು, ಬಿ.ಕೆ. ಶ್ರೀನಾಥ್, ಧರ್ಮಪ್ರಸಾದ್, ಮಹಾನಗರ ಪಾಲಿಕೆ ಸದಸ್ಯ ಚೆನ್ನಬಸಪ್ಪ, ಇತರರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…