ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಟಿ.ವಿ. ರಂಜಿತ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ನೇಮಕ ಮಾಡಿದೆ.ಟಿ.ವಿ. ರಂಜಿತ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಹುದ್ದೆಗಳನ್ನು ಜಿಲ್ಲಾ ಮಟ್ಟದಲ್ಲಿ ಅಲಂಕರಿಸಿದ್ದಾರೆ. ಅವರನ್ನು ಈಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಪಕ್ಷ ನೀಡುವ ಜವಾಬ್ದಾರಿಗಳನ್ನು ಯಾವುದೇ ಉಲ್ಲಂಘನೆಯಾಗದಂತೆ ಕರ್ತವ್ಯ ನಿರ್ವಹಿಸಲು ಮತ್ತು ಸಂಘಟನೆಗೆ ಒತ್ತು ಕೊಡುವಂತೆ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾದ್ಯಕ್ಷ ಹೆಚ್.ಪಿ. ಗಿರೀಶ್ ಮುಖಂಡರಾದ ಕೆ. ರಂಗನಾಥ್, ಎಂ. ಪ್ರವೀಣ್ ಕುಮಾರ್, ರಾಹುಲ್, ಲೋಕೇಶ್ ಮುಂತಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…