ಶಿವಮೊಗ್ಗ: ಹಿಜಾಬ್ ಕುರಿತು ರಾಜ್ಯ ಉಚ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಇಂದು ತೀರ್ಪು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಹಿಜಾಬ್ ಕುರಿತಂತೆ ಸಾಕಷ್ಟು ಚರ್ಚೆಗಳು ನಡೆದಿದ್ದು, ಇದೀಗ ನ್ಯಾಯಾಲಯದ ತೀರ್ಪು ಹೊರ ಬಿದ್ದಿದೆ.  ಇದನ್ನು ನಾವುಗಳು ಸ್ವಾಗತಿಸುತ್ತೇವೆ ಎಂದರು. ಇದುವರೆಗೂ ವಿದ್ಯಾರ್ಥಿನಿಯರಿಗೆ ಪಾಠ, ಪ್ರವಚನಗಳು ಸಿಗದಂತಾಗಿದೆ.  ಮುಂದಿನ ದಿನಗಳಲ್ಲಿ ಅವರುಗಳು ಶಾಲಾ ಕಾಲೇಜುಗಳಿಗೆ ತೆರಳಿ, ಪಾಠ, ಪ್ರವಚನಗಳು ಕೇಳುವಂತಾಗಲಿ. ಈ ನಿಟ್ಟಿನಲ್ಲಿ ಮಾರ್ಗದರ್ಶನ ಅಗತ್ಯವಾಗಿದೆ. ಆ ಕಾರ್ಯವನ್ನು ಹಿಜಾಬ್ ಬೆಂಬಲಿಸುತ್ತಿದ್ದವರು ಮಾಡಬೇಕಾಗಿದೆ ಎಂದರು.

ರಾಜ್ಯದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳಿಗೆ ಯಾರನ್ನು ನೇಮಕ ಮಾಡಬೇಕೆಂದು ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಯುವಕರನ್ನೋ, ಅಥವಾ ಹಿರಿಯರನ್ನೋ ಎಂಬುದು ನಮ್ಮ ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಯಾರನ್ನು ನೇಮಿಸಿದರೂ ಕೂಡಾ ನಾವು ಒಪ್ಪಿಕೊಳ್ಳುತ್ತೇವೆ ಎಂದರು.ಏ.24 ರಂದು ಜಿಲ್ಲೆಯ ಹೊಳಲೂರಿಗೆ ಪ್ರಧಾನ ಮಂತ್ರಿಗಳು ಆಗಮಿಸಲಿದ್ದಾರೆ ಅದಕ್ಕೆ ಬೇಕಾದ ಎಲ್ಲಾ ರೀತಿಯ ತಯಾರಿ ಕೂಡಾ ಈಗಾಗಲೇ ನಡೆದಿದೆ. ಆ ಗ್ರಾಮದಲ್ಲಿಯೇ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಅಂದು 12 ಗಂಟೆಗೆ ಪ್ರಧಾನ ಮಂತ್ರಿಗಳು ಆಗಮಿಸುತ್ತಾರೆ. 1 ಗಂಟೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಮಂತ್ರಿಗಳ ಆಗಮನ ಅತ್ಯಂತ ಸಂತೋಷ ತಂದಿದೆ. ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದರು.  

ವರದಿ ಮಂಜುನಾಥ್ ಶೆಟ್ಟಿ…